20 ರಂದು ದೇಶಾದ್ಯಂತ ಸರ್ಕಾರಿ ನೌಕರರ ಮುಷ್ಕರ
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೌಕರರ ವಿರೋಧಿ ನೀತಿ ವಿರುದ್ಧ ಅಖಿಲ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಫೆ. 20 ಮತ್ತು 21 ರಂದು ದೇಶಾದ್ಯಂತ ಮುಷ್ಕರ ನಡೆಸಲಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೌಕರರ ಹಾಗೂ ಕಾರ್ಮಿಕರ ನಿವೃತ್ತ ವೇತನ ನೀತಿಯನ್ನು ಬದಲಾಯಿಸಿ, ಖಾಸಗಿಯವರಿಗೆ ನೀಡಲು ಮುಂದಾಗಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಸರ್ಕಾರ ಅನುವು ಮಾಡಿಕೊಡುತ್ತಿದೆ. ಸಾರ್ವಜನಿಕ ಉದ್ಯಮಗಳಾದ ಬ್ಯಾಂಕ್ ಮತ್ತು ಇನ್ಸೂರೆನ್ಸ್ ವಿಭಾಗದಲ್ಲಿರುವ ಸರ್ಕಾರದ ಹೂಡಿಕೆಯನ್ನು ಖಾಸಗಿ ವಿದೇಶಿ ಬಂಡವಾಳದಾರರಿಗೆ ನೀಡಲು ಸರ್ಕಾರ ಮುಂದಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೇಂದ್ರ ಹಾಗೂ ವಿವಿಧ ರಾಜ್ಯ ಸರ್ಕಾರಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಅಧಿಕ ಕಾಯಂ ಹುದ್ದೆಗಳಿದ್ದರೂ, ಹಾಲಿ ನೌಕರರ ಮೇಲೆ ಹೆಚ್ಚಿನ ಕೆಲಸದ ಹೊರೆ ಹೊರಿಸಲಾಗಿದೆ. ಖಾಸಗಿ ಕಂಪೆನಿಯು ಕಾಂಟ್ರಾಕ್ಟ್ ಆಧಾರದಲ್ಲಿ ಕಡಿಮೆ ಸಂಬಳಕ್ಕೆ ದುಡಿಸುತ್ತಿದ್ದು, ನಿರುದ್ಯೋಗವಂತರ ಲಾಭವನ್ನು ಪಡೆಯುತ್ತಿದೆ ಎಂದರು.
ಬೇಡಿಕೆಗಳು: ಕೇಂದ್ರ ಹಾಗೂ ರಾಜ್ಯ ನೌಕರರ ವೇತನದ ನಡುವಿನ ಶೇ 20 ರಷ್ಟು ವ್ಯತ್ಯಾಸವನ್ನು ಸರಿಪಡಿಸುವುದು ಹಾಗೂ ರಾಷ್ಟ್ರೀಯ ವೇತನ ನೀತಿ ಜಾರಿಗೊಳಿಸುವುದು. ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ತುಟ್ಟಿಭತ್ಯೆ ನೀಡುವುದು. ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಿನಿಂದ ಜಾರಿ ಮಾಡುವುದು. ಸಾರ್ವಜನಿಕ ಉದ್ಯಮಗಳಲ್ಲಿ ಬಂಡವಾಳದ ಹಿಂತೆಗೆತ ಹಾಗೂ ಎಫ್ಡಿಐ(ಖಾಸಗಿ ವಿದೇಶಿ ಬಂಡವಾಳ)ಗಳಿಗೆ ಅವಕಾಶ ನಿಲ್ಲಿಸುವುದು.
ಪ್ರಮುಖ ಬೇಡಿಕೆಗಳಿಗಾಗಿ ದೇಶಾದ್ಯಂತ ಸಾಮೂಹಿಕ ಮುಷ್ಕರ ನಡೆಸಲು ಒಕ್ಕೂಟದ ಜತೆಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು, ನೌಕರರು, ಕಾರ್ಮಿಕರು ಭಾಗವಹಿಸುವಂತೆ ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

