ದಕ್ಷಿಣ ಕನ್ನಡ

ಪರವಾನಗಿ ನೀಡದಂತೆ ರಿಕ್ಷಾ ಚಾಲಕ- ಮಾಲೀಕರ ಅಂಚೆ ಚಳವಳಿ

Published On :

ಪುತ್ತೂರು: ತಾಲೂಕಿನಲ್ಲಿ ರಿಕ್ಷಾಗಳ ಸಂಖ್ಯೆ ಹೆಚ್ಚಾಗಿದ್ದು, ಮುಂದಿನ 5 ವರ್ಷಗಳ ತನಕ ತಾಲೂಕಿನಲ್ಲಿ ರಿಕ್ಷಾಗಳಿಗೆ ನೂತನ ಪರವಾನಗಿ ನೀಡುವುದನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಿಕ್ಷಾ ಚಾಲಕ ಮಾಲೀಕರ ಸಂಘದ ವತಿಯಿಂದ 2ನೇ ಹಂತದ ಪೋಸ್ಟ್‌ಕಾರ್ಡ್ ಚಳವಳಿಯನ್ನು ನಡೆಸಲಾಯಿತು. ಜಯ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಖಾದರ್ ಹಾಜಿ ಕೂರ್ನಡ್ಕ ಅವರು ಅಂಚೆ ಡಬ್ಬಿಗೆ ಕಾರ್ಡ್ ಹಾಕುವ ಮೂಲಕ ಕಾರ್ಡ್ ಚಳವಳಿಗೆ ಚಾಲನೆ ನೀಡಿದರು. ಸಂಘದ ಗೌರವ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆ, ಅಧ್ಯಕ್ಷ ಅಬ್ದುಲ್ ಜಲೀಲ್, ಕಾರ್ಯದರ್ಶಿ ಸೇಸಪ್ಪ ನಾಯ್ಕ, ಮಾಜಿ ಅಧ್ಯಕ್ಷ ಜಯರಾಮ ಕುಲಾಲ್,  ಸದಸ್ಯ ಗಿರೀಶ್ ನಾಯ್ಕ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.