ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
ಮಂಗಳೂರು: ಹೊಯ್ಗೆಬೈಲು ನಿರ್ಮಾಣ ಹಂತದಲ್ಲಿರುವ ಅಶೋಕ್ ಪ್ಯಾರಡೈಸ್‌ನಲ್ಲಿ ಗಾರೆ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಮಧ್ಯಪ್ರದೇಶದ ಮಾನ್ ಸಿಂಗ್ (20) ಮೃತಪಟ್ಟಿದ್ದಾರೆ. ಶನಿವಾರ ಸಂಜೆ ಸಂಜೆ ದುರ್ಘಟನೆ ನಡೆದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದರು. ವಾರೀಸುದಾರರು ಮಂಗಳವಾರ ಮಧ್ಯಪ್ರದೇಶದಿಂದ ಆಗಮಿಸಿ, ಶವ ಪಡೆದುಕೊಂಡಿದ್ದಾರೆ.
ಶಿಶು ಸಾವು: ಆಕ್ರೋಶ
ಮಂಗಳೂರು: ದೇರಳಕಟ್ಟೆ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕ್ರೋಶಿತ ಜನರು ವೈದ್ಯರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು.
24ರಂದು ಉಚಿತ ವೈದ್ಯಕೀಯ ತಪಾಸಣೆ
ಪುತ್ತೂರು: ನಗರದ ಮಹಾವೀರ ಮೆಡಿಕಲ್ ಸೆಂಟರ್‌ನ ವೈದ್ಯರಿಂದ ಫೆ.24ರಂದು ಉಚಿತ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ರಕ್ತ ಪರೀಕ್ಷೆ ಮತ್ತು ಚಿಕಿತ್ಸೆ ನಡೆಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಡಾ.ಅಶೋಕ್ ಪಡಿವಾಳ್ ತಿಳಿಸಿದ್ದಾರೆ. ಸಂಸ್ಥೆಯ ನುರಿತ ವೈದ್ಯರಾದ ಡಾ. ಸುರೇಶ್ ಪುತ್ತೂರಾಯ, ಡಾ.ಪ್ರದೀಪ್ ಕುಮಾರ್ ಬೋರ್ಕರ್, ಡಾ. ರಾಜೇಶ್ವರಿ ಪಡಿವಾಳ್, ಡಾ. ಯಶವಂತ. ಡಾ.ರಶ್ಮಿ ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ನಡೆಸಲಿದ್ದಾರೆ. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ. ಈ ವೈದ್ಯರ ತಂಡ ಪ್ರತಿ ತಿಂಗಳು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ನಡೆಸುತ್ತಿದ್ದು, ಶಿಬಿರಗಳನ್ನು ನಡೆಸಲು ಇಚ್ಛಿಸುವವರು ಸಂಪರ್ಕಿಸುವಂತೆ ಡಾ. ಅಶೋಕ್ ಪಡಿವಾಳ್ ವಿನಂತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

