ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಾರ್ಡ್‌ಗಳಲ್ಲಿ ಬಿಜೆಪಿ ಸ್ಪರ್ಧೆ: ಮೋನಪ್ಪ ಭಂಡಾರಿ

Published On :

ಮಂಗಳೂರು: ದ.ಕ.ಜಿಲ್ಲೆಯ ಸ್ಥಳೀಯಾಡಳಿತ ಚುನಾವಣೆಯಲ್ಲಿ ಬಿಜೆಪಿ ಎಲ್ಲ ವಾರ್ಡ್‌ಗಳಲ್ಲಿ ಸ್ಪರ್ಧಿಸಲಿದೆ. ಯಾರೊಂದಿಗೂ ಹೊಂದಾಣಿಕೆ ನಡೆಸದು ಎಂದು ವಿಧಾನಪರಿಷತ್ತು ಸದಸ್ಯ, ಜಿಲ್ಲಾ ವಕ್ತಾರ ಮೋನಪ್ಪ ಭಂಡಾರಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಪಟ್ಟಿ ಪ್ರಕಟಿಸಲಾಗುವುದು. ಈ ಬಾರಿ ಎಲ್ಲ 180 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, 125 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಕಳೆದ ಬಾರಿ 154 ಸ್ಥಾನದಲ್ಲಿ ಸ್ಪರ್ಧಿಸಿ 84 ಸ್ಥಾನಗಳಲ್ಲಿ ಮಾತ್ರ ಬಿಜೆಪಿ ಗೆದ್ದಿತ್ತು ಎಂದರು.
ಮಂಗಳೂರಿಗೆ ಮೋನಪ್ಪ ಭಂಡಾರಿ, ಪುತ್ತೂರಿಗೆ ವಿಶ್ವೇಶ್ವರ ಭಟ್ ಬಂಗಾರಡ್ಕ, ಸುಳ್ಯಕ್ಕೆ ಸಂಜೀವ ಮಠಂದೂರು, ಬೆಳ್ತಂಗಡಿಗೆ ಕುಶಾಲಪ್ಪ ಗೌಡ, ಬಂಟ್ವಾಳಕ್ಕೆ ಆನಂದ, ಮೂಡುಬಿದಿರೆಗೆ ಅಮಾನಾಥ ಕೋಟ್ಯಾನ್, ಉಳ್ಳಾಲಕ್ಕೆ ಸತೀಶ್ ಕುಂಪಲ ಚುನಾವಣಾ ಉಸ್ತುವಾರಿಗೆ ಪ್ರಭಾರಿ ಆಗಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂರ್ನಾಲ್ಕು ಕ್ಷೇತ್ರಕ್ಕೆ ಒಬ್ಬೊಬ್ಬ ಪ್ರಭಾರಿ ನೇಮಿಸಲಾಗಿದೆ. ಜಿಲ್ಲೆಗೆ ಪ್ರತಾಪ್‌ಸಿಂಹ ನಾಯಕ್ ಪ್ರಭಾರಿ ಆಗಿದ್ದು, ಶಾಸಕ, ಸಂಸದರು ಸಾಥ್ ನೀಡಲಿದ್ದಾರೆ ಎಂದರು.
ಧನಂಜಯ್ ಜೆಡಿಎಸ್‌ಗೆ?: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುವ ಕೇಂದ್ರ ಮಾಜಿ ಸಚಿವ ಧನಂಜಯ ಕುಮಾರ್, ನೀರಿಗೆ ಕಲ್ಲು ಬಿಸಾಡಿ ಸಂತೋಷ ಪಡುವುದು ಸರಿಯಲ್ಲ. ಪಕ್ಷಾಂತರದ ಬಗ್ಗೆ ಸಲ್ಲದ ಮಾತನಾಡದೆ, ಗೌರವದಿಂದ ಮಾತನಾಡಲು ಕಲಿಯಬೇಕು. ಡೀವಿ ಬಗ್ಗೆ ಊಹನಾತ್ಮಕ ಮಾತನಾಡುವ ಅವರೇ ಜೆಡಿಎಸ್‌ಗೆ ಹೋಗುತ್ತಾರೆಯೇ ಎಂದು ಮರು ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.