27ರಿಂದ ವಿವಿ ಮಟ್ಟದ ಕ್ರಿಕೆಟ್ ಪಂದ್ಯಾವಳಿ
ಮೂಲ್ಕಿ: ಹಳೆಯಂಗಡಿಯ ಲಯನ್ಸ್ ಕ್ಲಬ್ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಫೆ.27ರಂದು ಸುರತ್ಕಲ್ನ ಎನ್.ಐ.ಟಿ.ಕೆ ಕ್ರೀಡಾಂಗಣದಲ್ಲಿ ಮಾಜಿ ಶಾಸಕ ಲಯನ್ಸ್ ಸೋಮಪ್ಪ ಸುವರ್ಣ ಸ್ಮರಣಾರ್ಥ ಎರಡನೇ ವರ್ಷದ ಮಂಗಳೂರು ವಿವಿ ಮಟ್ಟದ ಅಂತರ್ ಸರ್ಕಾರಿ ಕಾಲೇಜುಗಳ ಕ್ರಿಕೆಟ್ ಪಂದ್ಯಾವಳಿ ಜರಗಲಿದೆ. ಬೆಳಿಗ್ಗೆ ಕ್ರೀಡಾಕೂಟವನ್ನು ರಾಜ್ಯ ವಿಪಕ್ಷ ಮುಖ್ಯ ಸಚೇತಕ ಕೆ. ಅಭಯಚಂದ್ರ ಜೈನ್ ಉದ್ಘಾಟಿಸಲಿದ್ದಾರೆ.
ಲಯನ್ಸ್ ವಲಯಾಧ್ಯಕ್ಷ ಹರೀಶ್ ಪುತ್ರನ್, ಎಪಿಎಂಸಿ ಸದಸ್ಯ ಪ್ರಮೋದ್ ಕುಮಾರ್, ಮಂಗಳೂರು ವಿ.ವಿ. ದೈಹಿಕ ಶಿಕ್ಷಕರ ಸಂಘದ ನಿರ್ದೇಶಕ ಚಂದ್ರಶೇಖರ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ ಜರಗಲಿರುವ ಸಮಾರೋಪ ಸಮಾರಂಭದಲ್ಲಿ ಉದ್ಯಮಿಗಳಾದ ಚಂದ್ರಶೇಖರ ನಾನಿಲ್, ಧನಂಜಯ ಕೋಟ್ಯಾನ್ ಮಟ್ಟು, ಜಯ ಕರ್ನಾಟಕ ಸಂಘಟನೆಯ ದ.ಕ. ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಚಿರಂಜೀವಿ ಹಳೆಯಂಗಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

