ಚಿನ್ನ ಕಳ್ಳ ಸಾಗಾಟ: ವಿಮಾನ ನಿಲ್ದಾಣದಲ್ಲಿ ಭಟ್ಕಳ ವ್ಯಕ್ತಿ ಸೆರೆ
ಮಂಗಳೂರು: ದುಬೈಯಿಂದ ಮಂಗಳೂರಿಗೆ ಚಿನ್ನ ಸ್ಮಗಲ್ ಮಾಡುತ್ತಿದ್ದ ಭಟ್ಕಳದ ಅಬ್ದುಲ್ ಗನಿ ಎಂಬಾತನನ್ನು ಬಜಪೆ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ಆರೋಪಿಯಿಂದ 300 ಗ್ರಾಂ ಚಿನ್ನಾಭರಣ ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾಲ್ಕು ದಿನಗಳ ಹಿಂದೆ ದುಬೈಯಿಂದ ಚಿನ್ನ ಕಳ್ಳಸಾಗಾಟ ಮಾಡುತ್ತಿದ್ದ ಭಟ್ಕಳದ ವ್ಯಕ್ತಿಯನ್ನು ಇದೇ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಲಾಗಿತ್ತು. ದುಬೈಯಿಂದ ಜೆಟ್ ಏರ್ವೇಸ್ನಲ್ಲಿ ಬಂದಿದ್ದ ಅಬ್ದುಲ್ ಗನಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಪ್ರಶ್ನಿಸಿದಾಗ ಆತ ಅಡಗಿಸಿಟ್ಟ 300 ಗ್ರಾಂ ಚಿನ್ನ ಪತ್ತೆಯಾಯಿತು. ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಮಾ.6ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನೇಣು ಬಿಗಿದು ವೃದ್ಧ ಆತ್ಮಹತ್ಯೆ
ಬಂಟ್ವಾಳ: ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದ ಮುಂಭಾಗ ಮರಕ್ಕೆ ನೇಣು ಬಿಗಿದು ವೃದ್ಧ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಬಿ.ಮೂಡ ಗ್ರಾಮದ ಕುಲಾಲ ಮಠ ನಿವಾಸಿ ಕೃಷ್ಣಪ್ಪ (62) ಮೃತರು. ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದು ಮಂಗಳವಾರ ಸಂಜೆ 6.30 ರಿಂದ ಬೆಳಗ್ಗೆ 7.30ರ ನಡುವೆ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ದಾರಿಹೋಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಗಂಗಾಧರ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಕೇಸು ದಾಖಲಿಸಿದ್ದಾರೆ.
ಆಟೋ ಚಾಲಕನ ಮೇಲೆ ಹಲ್ಲೆ, ಜೀವಬೆದರಿಕೆ
ವಿಟ್ಲ: ಆಟೋ ಚಾಲಕರೊಬ್ಬರ ಮೇಲೆ ಇಬ್ಬರ ತಂಡ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಘಟನೆ ಮಂಗಳವಾರ ರಾತ್ರಿ ಸಾಲೆತ್ತೂರಿನಲ್ಲಿ ನಡೆದಿದೆ. ಸಾಲೆತ್ತೂರು ಆಟೋ ಚಾಲಕ ಮೋನಪ್ಪ ಹಲ್ಲೆಗೀಡಾಗಿದ್ದು, ರಾತ್ರಿ ಸುಮಾರು 8 ಗಂಟೆಯ ಸಮಯಕ್ಕೆ ಸಾಲೆತ್ತೂರು ಮೈದಾನಕ್ಕೆ ಮಾರುತಿ ಆಲ್ಟೋ ಕಾರಿನಲ್ಲಿ ಬಂದ ಶಶಿಧರ ಕಾಡುಮಠ ಹಾಗೂ ಕಾಡುಮಠ ನಿವಾಸಿ ರಾಜು ಎಂಬವರು ಪಾರ್ಕಿಂಗ್ನಲ್ಲಿದ್ದ ಮೋನಪ್ಪರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ಕಾರಿನ ಲಿವರ್ ರಾಡ್ನಿಂದ ಏಕಾಎಕಿ ಹಲ್ಲೆ ನಡೆಸಿದ್ದಾರೆ ಎಂದು ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಆರೋಪಿಸಿದ್ದಾರೆ. ಆ ಸಮಯ ಸ್ಥಳದಲ್ಲಿದ್ದ ಇತರ ಆಟೋ ಚಾಲಕರು ಜಮಾಯಿಸುತ್ತಿದ್ದಂತೆಯೇ ಆರೋಪಿಗಳು ತಾವು ಬಂದ ಆಲ್ಟೋ ಕಾರಿನಲ್ಲಿ ಜೀವಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆನ್ನಲಾಗಿದೆ. ವಿಟ್ಲ ಪೊಲೀಸರು ಆರೋಪಿಗಳ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ಹಲ್ಲೆಗೆ ಪೂರ್ವ ಧ್ವೇಷವೇ ಕಾರಣವೆಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

