ದಕ್ಷಿಣ ಕನ್ನಡ

ಧರ್ಮಪ್ರಜ್ಞೆ ಕೊರತೆಯಿಂದ ಅನಾಹುತ: ಒಡಿಯೂರು ಶ್ರೀ

Published On :

ವಿಟ್ಲ: ಅಧ್ಯಾತ್ಮ ಚಿಂತನೆಗಳನ್ನು ಒಗ್ಗೂಡಿಸಿ ಬದುಕು ಸಾಗಿಸಿದಾಗ ಉತ್ತಮ ಜೀವನ ನಡೆಸಬಹುದು, ಧರ್ಮಪ್ರಜ್ಞೆ ಕೊರತೆಯಿಂದ ಅನಾಹುತಗಳು ಸಂಭವಿಸುತ್ತವೆ ಎಂದು ಒಡಿಯೂರು ಶ್ರೀಗುರುದೇವದತ್ತಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.
ಬುಧವಾರ ಒಡಿಯೂರು ಶ್ರೀಸಂಸ್ಥಾನದ ಆತ್ರೇಯ ವೇದಿಕೆಯಲ್ಲಿ ಶ್ರೀಗುರುದೇವದತ್ತ ಸಂಸ್ಥಾನದ ರಜತ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂಸ್ಥಾನದ ಶ್ರೀಮಾತಾನಂದಮಯಿ ಆಶೀರ್ವಚನ ನೀಡಿದರು.
ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಹೈಕೋರ್ಟ್‌ನ ಎಡಿಶನಲ್ ಅಡ್ವೋಕೇಟ್ ಜನರಲ್ ನಟರಾಜ್ ಕೆ.ಎನ್.ಮಾತನಾಡಿ, ಒಡಿಯೂರು ಕ್ಷೇತ್ರದ ಮೂಲಕ ಅಧ್ಯಾತ್ಮ, ಸಂಸ್ಕಾರ ಹಾಗೂ ಸಾಮಾಜಿಕ ಕಾರ್ಯಗಳು ನಿರಂತರವಾಗಿ ನಡೆಯುತ್ತವೆ ಎಂದರು.  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ, ಅದ್ಯಪಾಡಿ ಶ್ರೀನೀಲಕಂಠ ಉಮಾಮಹೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಶೆಡ್ಡೆ ಮಂಜುನಾಥ ಭಂಡಾರಿ, ಥಾನದ ಉದ್ಯಮಿ ಮೋಹನ್ ಹೆಗ್ಡೆ ಥಾನ, ಮುಂಬೈ ಶ್ರೀಗುರುದೇವ ಸೇವಾ ಬಳಗದ ಮಾಜಿ ಅಧ್ಯಕ್ಷ ಆರ್.ಡಿ.ಸುವರ್ಣ, ಮಂಗಳೂರು ಸಮಿತಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಒಡಿಯೂರು ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಬಿಜೈ, ಪುಣೆ ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ, ದಾವಣಗೆರೆ ಸಮಿತಿಯ ಸಿದ್ಧರಾಮಯ್ಯ, ಕರೋಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಲೀಲ್ ಕರೋಪಾಡಿ ಇದ್ದರು.
ರೇಣುಕಾ ಎಸ್. ರೈ ಪ್ರಾರ್ಥಿಸಿದರು. ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಪ್ರಧಾನ ಸಂಚಾಲಕ ತಾರಾನಾಥ ಟಿ.ಕೊಟ್ಟಾರಿ ಸ್ವಾಗತಿಸಿದರು. ಸಂಸ್ಥಾನದ ಕಾರ್ಯನಿರ್ವಾಹಕ ಜಗನ್ನಾಥ ರೈ ವಂದಿಸಿದರು. ಮುಂಬೈ ಸಮಿತಿ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪೇಟೆಮನೆ ನಿರೂಪಿಸಿದರು.
ಮುಂಬೈಯ ಆನಂದ ಹೆಗ್ಡೆ ರಚಿಸಿದ 'ಹನುಮಾನ್ ಚಾಲೀಸ್‌' 11ನೇ ಆವೃತ್ತಿಯ ಬಿಡುಗಡೆ ನಡೆಯಿತು.  ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮನೆ ನಿರ್ಮಾಣಕ್ಕೆ, ಚಿಕಿತ್ಸೆಗೆ ಸಹಾಯಹಸ್ತ ನೀಡಲಾಯಿತು. ಶ್ರೀಸಂಸ್ಥಾನದಲ್ಲಿ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.