ಕದ್ರಿ, ಕಂಬಾರ, ಸುಬ್ಬಯ್ಯಗೆ ಮಂಗಳೂರು ವಿವಿ ಗೌಡಾ
ಮಂಗಳೂರು: ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ, ಹಾಕಿ ಪಟು, ಸಮಾಜ ಸೇವಕ ಎ.ಬಿ. ಸುಬ್ಬಯ್ಯ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.
ಕೊಣಾಜೆಯ ವಿವಿ ಕ್ಯಾಂಪಸ್‌ನಲ್ಲಿ ಫೆ.23ರಂದು ಜರುಗುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಮತ್ತು 84 ಮಂದಿಗೆ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಟಿ.ಸಿ. ಶಿವಶಂಕರಮೂರ್ತಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಡಿಕೇರಿಯಲ್ಲಿ ಜನಿಸಿದ ಸುಬ್ಬಯ್ಯ 1988ರಿಂದ 98ರವರೆಗೆ ರಾಷ್ಟ್ರೀಯ ಹಾಕಿ ತಂಡದಲ್ಲಿ ಆಡಿದ್ದಾರೆ. 1997ರಲ್ಲಿ ಅರ್ಜುನ ಪ್ರಶಸ್ತಿ, 2003ರಲ್ಲಿ ಏಕಲವ್ಯ ಪ್ರಶಸ್ತಿ ಪಡೆದಿದ್ದಾರೆ. ಮೂವರಿಗೆ ಗೌರವ ಡಾಕ್ಟರೇಟ್ ನೀಡುವ ವಿಚಾರದಲ್ಲಿ ರಾಜ್ಯಪಾಲರು ಸಂತೋಷದಿಂದಲೇ ಸಹಿ ಹಾಕಿದರು ಎಂದರು. 7ಮಂದಿಗೆ ಎಂಫಿಲ್, 36ಮಂದಿಗೆ ಚಿನ್ನದ ಪದಕ, 55 ಮಂದಿಗೆ ನಗದು ಬಹುಮಾನ ನೀಡಲಾಗುವುದು. ಒಟ್ಟು 60 ಮಂದಿಗೆ ರ್ಯಾಂಕ್ ನೀಡಲಾಗುವುದು. 2011-12 ಸಾಲಿನಲ್ಲಿ 30384 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 18969 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇದರಲ್ಲಿ ಸ್ನಾತಕೋತ್ತರ ಪರೀಕ್ಷೆಗೆ 3815 ವಿದ್ಯಾರ್ಥಿಗಳು ಹಾಜರಾಗಿದ್ದು, 3391 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ನಾತಕೋತ್ತರ ಡಿಪ್ಲೊಮ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ 18 ಮಂದಿ ತೇರ್ಗಡೆಯಾಗದ್ದಾರೆ.
ಚಿನ್ನದ ಬೆಲೆ ಹೆಚ್ಚಾದ್ದರಿಂದ ಪದಕ ನೀಡಲು 43,607 ಕೊರತೆಯಾಗಲಿದೆ. ಸಿಂಡಿಕೇಟ್ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ವಿವಿ ಹಣವನ್ನು ಭರಿಸಲಿದೆ.
ಎಂಸಿಎಂಎಸ್‌ನ ಮೂರು ಬ್ಯಾಚ್‌ನ 31 ವಿದ್ಯಾರ್ಥಿಗಳಿಗೆ ತಡೆಹಿಡಿಯಲಾಗಿದ್ದ ಪದವಿಯನ್ನು ಈ ಬಾರಿ ಪ್ರದಾನ ಮಾಡಲಾಗುವುದು. ಸ್ವಾಯತ್ತ ಕಾಲೇಜು ಮತ್ತು ವಿವಿ ನಡುವೆ ಇದ್ದ ವಿವಾದ ಬಗೆಹರಿದಿದೆ ಎಂದು ಕುಲಪತಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಲಸಚಿವ ಪಿ.ಎಸ್. ಯಡಪಡಿತ್ತಾಯ, ಪರೀಕ್ಷಾಂಗ ಕುಲಸಚಿವ ನಾರಾಯಣ, ಪತ್ರಿಕೋದ್ಯಮ ವಿಭಾಗದ ಜಿ.ಪಿ. ಶಿವರಾಮ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

