ದಕ್ಷಿಣ ಕನ್ನಡ

ಮಾಜಿ ಸಿಎಂ ಡೀವಿ ಕಡೆಗಣನೆಗೆ ಅನಂತ ಕಾರಣ: ಆರೋಪ

Published On :

ಮಂಗಳೂರು: ಸಂಸದ ಅನಂತ ಕುಮಾರ್ ಅವರು ಬಿಜೆಪಿ ಪಕ್ಷದವರನ್ನು ಸಂದರ್ಭಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದು, ಈ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ಕಡೆಗಣಿಸಲಾಗುತ್ತಿದೆ ಎಂದು ಜಿಲ್ಲಾ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಎಸ್.ಎನ್. ನಾರಾಯಣ ಗೌಡ ಆರೋಪಿಸಿದ್ದಾರೆ.
 ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಈ ಪರಿಸ್ಥಿತಿಯಾದರೆ, ದ.ಕ. ಜಿಲ್ಲೆಯ ಬಿಜೆಪಿಯನ್ನು ಆರ್‌ಎಸ್‌ಎಸ್ ಶಕ್ತಿ ಆಳುತ್ತಿದೆ ಎಂದು ಆರೋಪಿಸಿದರು.
 ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯಕ್ಕೆ ರಾಜಕೀಯ ಪಕ್ಷದಲ್ಲಿ ಅವಕಾಶ ಕಲ್ಪಿಸಬೇಕು. ಜಿಲ್ಲೆಯ ಸುಳ್ಯ- ಶೇ. 65, ಪುತ್ತೂರು- ಶೇ. 50, ಬೆಳ್ತಂಗಡಿ- ಶೇ. 45, ಬಂಟ್ವಾಳ- 15, ಒಟ್ಟು ದ.ಕ. ಸಂಸತ್ ಕ್ಷೇತ್ರದಲ್ಲಿ 2.75 ಲಕ್ಷ ಗೌಡ ಜನಾಂಗದ ಮತದಾರರಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಗೌಡ ಸಮುದಾಯದವರು ಅಧಿಕವಾಗಿದ್ದರೂ ಮೀಸಲು ಕ್ಷೇತ್ರವಾಗಿರುವುದರಿಂದ ಅಲ್ಲಿ ಅವಕಾಶ ಸಿಗುತ್ತಿಲ್ಲ ಎಂದರು.
 ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರಾಜಕೀಯ ಪ್ರತಿನಿಧಿಗಳ ಆಯ್ಕೆ ಸಂದರ್ಭದಲ್ಲಿ ಸಮುದಾಯದ ಸಂಖ್ಯಾಬಲವನ್ನು ಪರಿಗಣಿಸದೆ ಕಡೆಗಣಿಸಲಾಗುತ್ತಿದೆ. ಎಲ್ಲ ಪಕ್ಷದವರು ಗೌಡ ಸಮುದಾಯದವರನ್ನು ಸಕ್ರೀಯವಾಗಿ ಪಕ್ಷದ ಕೆಲಸಕ್ಕೆ ಬಳಕೆ ಮಾಡುತ್ತಿದ್ದಾರೆಯೇ ಹೊರತು ಸ್ಥಾನಮಾನ ನೀಡುತ್ತಿಲ್ಲ ಎಂದು ಆರೋಪಿಸಿದರು.
ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಗೌಡ ಸಮುದಾಯ ಅಭ್ಯರ್ಥಿಗಳಿಗೆ ಸೂಕ್ತ ಪ್ರಾತಿನಿಧ್ಯ ಕೊಡಬೇಕು. ಇಲ್ಲವಾದಲ್ಲಿ ಮತದಾನದ ವೇಳೆ ಸೂಕ್ತ ಉತ್ತರ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.