ಇಂದು ಪಾಂಡಿಗದ್ದೆ ಶಾಲೆ ಸುವರ್ಣ ಮಹೋತ್ಸವ
ಸುಬ್ರಹ್ಮಣ್ಯ: ಪಂಜ ಸಮೀಪದ ಐವತ್ತೊಕ್ಲು ಗ್ರಾಮದ ಅತ್ಯಂತ ಗ್ರಾಮೀಣ ಪ್ರದೇಶವಾದ ಪಾಂಡಿಗದ್ದೆಯ ಕಿರಿಯ ಪ್ರಾಥಮಿಕ ಶಾಲೆ 1961ರಲ್ಲಿ ಕಂಬಳ ಪುಟ್ಟಣ್ಣ ಗೌಡರ ನೇತೃತ್ವದಲ್ಲಿ ಆರಂಭವಾಯಿತು. ಆ ಬಳಿಕ ಪ್ರಗತಿ ಪಥದಲ್ಲಿ ಸಾಗಿ ಇದೀಗ ಐವತ್ತು ವರ್ಷಗಳನ್ನು ಪೂರೈಸಿದೆ. ಈ ಸವಿನೆನಪಿಗಾಗಿ ಫೆ. 23ರಂದು ಸಂಭ್ರಮದ ಸುವರ್ಣ ಮಹೋತ್ಸವ ಸಮಾರಂಭ ಜರುಗಲಿದೆ. ಈ ದಿನ ಭವ್ಯ ರಂಗಮಂದಿರ ಉದ್ಘಾಟನೆಗೊಳ್ಳಲಿದೆ. ಅಲ್ಲದೆ ಸುವರ್ಣ ಪ್ರಭ ಸ್ಮರಣ ಸಂಚಿಕೆ ಅನಾವರಣಗೊಳ್ಳಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕಂಬಳ ತಿಳಿಸಿದರು.
ಸುಬ್ರಹ್ಮಣ್ಯದಲ್ಲಿ ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದ.ಕ.ಜಿ.ಪಂ. ಅಧ್ಯಕ್ಷ ಕೊರಗಪ್ಪ ನಾಯ್ಕ ಸುವರ್ಣರಂಗಮಂದಿರವನ್ನು ಉದ್ಘಾಟಿಸಲಿದ್ದಾರೆ. ಪಂಜ ಗ್ರಾ.ಪಂ. ಅಧ್ಯಕ್ಷೆ ಮಂಜುಳಾ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ. ಸದಸ್ಯೆಯರಾದ ದೇವಕಿ ಪಾಂಡಿಗದ್ದೆ, ರತ್ನಾವತಿ ಬೊಳ್ಳಾಜೆ, ಸಮೂಹ ಸಂಪನ್ಮೂಲ ವ್ಯಕ್ತಿ ಉಣ್ಣಿಕೃಷ್ಣನ್ ಮೊಳೆಂಜ ಜುಮ್ಮಾ ಮಸೀದಿಯ ಅಧ್ಯಕ್ಷ ಹಾಜಿ ಕೆ. ಮಹಮ್ಮದ್ ಮುಖ್ಯ ಅತಿಥಿಗಳಾಗಿದ್ದಾರೆ. ಸಂಜೆ ನಡೆಯುವ ಸಮಾರಂಭದಲ್ಲಿ ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಗುಣವತಿ ಕೊಲ್ಲಂತ್ತಡ್ಕ, ಆಶಾ ತಿಮ್ಮಪ್ಪ, ಭಾಗ್ಯ ಪ್ರಸನ್ನ, ಲಕ್ಷ್ಮಣ ಗೌಡ ಬೊಳ್ಳಾಜೆ,ಚಂದ್ರಶೇಖರ ಪೇರಾಲು, ದೇವರಾಜ್ ಮುತ್ಲಾಜೆ, ಚಿನ್ನಪ್ಪ ಗೌಡ, ಯೋಗೀಶ್. ಎ ಭಾಗವಹಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಉಪನ್ಯಾಸಕ ಶ್ರೀಶ ಕುಮಾರ್ ಬಿಡುಗಡೆಗೊಳಿಸಲಿದ್ದಾರೆ. ಇದೇ ಸಂದರ್ಭ ಈವರೆಗೆ ಶಾಲೆಯಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಶಿಕ್ಷಕರಿಗೆ ಗುರುವಂದನೆ ಕಾರ್ಯಕ್ರಮ ನೆರವೇರಲಿದೆ. ಗೋಷ್ಠಿಯಲ್ಲಿ ಶಾಲಾ ಮುಖ್ಯಗುರು ಹಾಗೂ ಕಾರ್ಯದರ್ಶಿ ಚಂದ್ರಶೇಖರ ಕುಕ್ಕುಪುಣಿ, ಸ್ಮರಣ ಸಂಚಿಕೆ ಸಂಪಾದಕ ಪುಷ್ಪರಾಜ್, ಹಳೆ ವಿದ್ಯಾರ್ಥಿ ರಮೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

