ದಕ್ಷಿಣ ಕನ್ನಡ

'ಶುಭದಿನ' ಶುಕ್ರವಾರ ನಾಮಪತ್ರಗಳ ಮಹಾಪೂರ

Published On :

ಉಡುಪಿ: ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸಲು 7ನೇ ದಿನವಾದ ಶುಕ್ರವಾರ 'ಒಳ್ಳೆಯ ದಿನ' ಎಂಬ ಕಾರಣಕ್ಕಾಗಿ ಭಾರಿ ಸಂಖ್ಯೆಯಲ್ಲಿ ನಾಮಪತ್ರಗಳು ಸಲ್ಲಿಕೆಯಾಗಿವೆ.
ಕಳೆದ 6 ದಿನಗಳಲ್ಲಿ ಸಲ್ಲಿಕೆಯಾದ ಒಂದೆರಡು ನಾಮಪತ್ರಗಳನ್ನು ಸ್ವೀಕರಿಸಿ ಆರಾಮದಲ್ಲಿದ್ದ ಅಧಿಕಾರಿಗಳು ಶುಕ್ರವಾರ ಬೆಳಗ್ಗೆಯಿಂದ ಸಂಜೆಯವರೆಗೆ ವಿಶ್ರಾಂತಿ ಇಲ್ಲದೆ ಕೆಲಸ ಮಾಡುವಂತಾಯಿತು.
221 ನಾಮಪತ್ರ: ಜಿಲ್ಲೆಯಲ್ಲಿ ಇದುವರೆಗೆ 1 ನಗರಸಭೆ, 2 ಪುರಸಭೆ ಮತ್ತು 1 ಪಟ್ಟಣ ಪಂಚಾಯಿತಿ ಸೇರಿ 4 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 221 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಅದರಲ್ಲಿ ಶುಕ್ರವಾರವೊಂದೇ ದಿನದಲ್ಲಿ 202 ನಾಮಪತ್ರಗಳು ಸಲ್ಲಿಕೆಯಾಗಿವೆ.
ಉಡುಪಿ ನಗರಸಭೆಗೆ 68 ನಾಮಪತ್ರ ಸಲ್ಲಿಕೆಯಾಗಿದ್ದು, ಅದರಲ್ಲಿ ಕಾಂಗ್ರೆಸ್‌ನಿಂದ 22, ಬಿಜೆಪಿಯಿಂದ 37, ಜೆಡಿಎಸ್ ಪಕ್ಷದಿಂದ 6 ಮತ್ತು ಪಕ್ಷೇತರ 3 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುತ್ತಾರೆ.
ಕಾರ್ಕಳ ಪುರಸಭೆಗೆ 49 ನಾಮಪತ್ರ ಸಲ್ಲಿಕೆಯಾಗಿದ್ದು ಬಿಜೆಪಿಯಿಂದ 22, ಕಾಂಗ್ರೆಸ್‌ನಿಂದ 17, ಜೆಡಿಎಸ್ ಪಕ್ಷದಿಂದ 6 ಮತ್ತು 6 ಮಂದಿ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುತ್ತಾರೆ.
ಕುಂದಾಪುರ ಪುರಸಭೆಗೆ ಒಟ್ಟು 62 ನಾಮಪತ್ರ ಸಲ್ಲಿಕೆಯಾಗಿದ್ದು, ಕಾಂಗ್ರಸ್‌ನಿಂದ 19, ಬಿಜೆಪಿಯಿಂದ 32, ಜೆಡಿಎಸ್ ಪಕ್ಷದಿಂದ 3, ಸಿಪಿಎಂನಿಂದ 6, ಮತ್ತು 2 ಮಂದಿ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುತ್ತಾರೆ.
ಸಾಲಿಗ್ರಾಮ ಪಟ್ಟಣ ಪಂಚಾಯಿತಿಗೆ ಒಟ್ಟು 23 ನಾಮಪತ್ರ ಸಲ್ಲಿಕೆಯಾಗಿದ್ದು, ಕಾಂಗ್ರೆಸ್‌ನಿಂದ 7,  ಬಿಜೆಪಿಯಿಂದ 14 ಹಾಗೂ ಬಿ.ಎಸ್.ಆರ್. ಕಾಂಗ್ರೆಸ್ ಪಕ್ಷದಿಂದ 2 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುತ್ತಾರೆ.
ಇಂದು ಗಡುವು: ನಾಮಪತ್ರ ಸಲ್ಲಿಕೆಗೆ ಶನಿವಾರ ಕೊನೆಯ ದಿನವಾಗಿದೆ, ನಾಮಪತ್ರಗಳ ಪರಿಶೀಲನೆ 25ರಂದು ನಡೆಯಲಿದೆ. 27ರಂದು ನಾಮಪತ್ರ ಹಿಂದೆ ಪಡೆಯಲು ಅಂತಿಮ ದಿನವಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ. ಟಿ. ರೇಜು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.