ದಕ್ಷಿಣ ಕನ್ನಡ

ಸುದ್ದಿ ಸಂಕ್ಷೇಪ

Published On :

ರಾ.ಸೇವಾ ಯೋಜನೆ ಪ್ರಶಸ್ತಿಗೆ ಆಯ್ಕೆ
ಉಡುಪಿ: ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರು ವಿವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು 2011- 12ನೇ ಸಾಲಿನ 'ರಾಜ್ಯದ ಅತ್ಯುತ್ತಮ ರಾ.ಸೇ. ಯೋಜನಾ ಪ್ರಶಸ್ತಿ'ಗಳನ್ನು ಗೆದ್ದುಕೊಂಡಿವೆ. ವಿಶ್ವವಿದ್ಯಾನಿಲಯ ಕಾಲೇಜಿನ ರಾ.ಸೇ.ಯೋ. ಘಟಕದ ಸ್ವಯಂ ಸೇವಕ ರಾಕೇಶ್ 'ಅತ್ಯುತ್ತಮ ಸ್ವಯಂ ಸೇವಕ ರಾಜ್ಯ ಪ್ರಶಸ್ತಿ' ಪಡೆದಿದ್ದಾರೆ. ಅಲ್ಲದೇ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕಿ ಡಾ. ನಿಕೇತನ ಮತ್ತು ಮಂಗಳೂರಿನ ವಿವಿ ಕಾಲೇಜಿನ ಹಿಂದಿ ವಿಭಾಗದ ಪ್ರಾಧ್ಯಾಪಕಿ ಡಾ. ನಾಗರತ್ನ ಎನ್. ರಾವ್  ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಫೆ. 25ರಂದು ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್  ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.