ದಕ್ಷಿಣ ಕನ್ನಡ

ಉಪ್ಪಿನಂಗಡಿಯಲ್ಲಿ ಮೊದಲ ಮಖೆ ಜಾತ್ರೆ ಸಂಭ್ರಮ

Published On :

ಉಪ್ಪಿನಂಗಡಿ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಸಹಸ್ರಲಿಂಗೇಶ್ವರ - ಮಹಾಕಾಳಿ ದೇವಾಲಯದಲ್ಲಿ ಮೊದಲ ಮಖೆ ಜಾತ್ರೆಯು ಶ್ರದ್ಧಾ ಭಕ್ತಿ ಸಡಗರಗಳಿಂದ ನಡೆಯಿತು.
ಕ್ಷೇತ್ರದಲ್ಲಿ ನಡೆಯುವ ಮೂರು ಮಖೆ ಜಾತ್ರೆಗಳ ಪೈಕಿ ಮೊದಲ ಮಖೆ ಜಾತ್ರೆಯು ಆದಿತ್ಯವಾರ ರಾತ್ರಿ ಸಂಪನ್ನಗೊಂಡು, ಸೋಮವಾರ ಮಧ್ಯಾಹ್ನದವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಆದಿತ್ಯವಾರ ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇವರ ಬಲಿ ಉತ್ಸವ, ರಥೋತ್ಸವವು ಜರಗಿತು. ಸೋಮವಾರ ಅಸಂಖ್ಯಾತ  ಭಕ್ತರು ನೇತ್ರಾವತಿ ಮತ್ತು ಕುಮಾರಾಧಾರ ನದಿ ಸಂಗಮ ಸ್ಥಳದಲ್ಲಿ ಪವಿತ್ರ ತೀರ್ಥ ಸ್ನಾನ ಮಾಡಿ, ದೇವತಾ ದರ್ಶನ ಮಾಡಿದರು.
ಸೋಮವಾರ ದೇವರ ದರ್ಶನ ಬಲಿ ಉತ್ಸವ, ಮಹಾಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಸದಸ್ಯರಾದ ಸುಂದರ ಗೌಡ, ಕಂಗ್ವೆ ವಿಶ್ವ್ವನಾಥ ಶೆಟ್ಟಿ, ಹರಿರಾಮಚಂದ್ರ, ಧನ್ಯಕುಮಾರ್ ರೈ, ಸುನಿಲ್, ಜ್ಯೋತಿ ಹೇರಂಭ, ಉಷಾ ಮುಳಿಯ, ಕಾರ್ಯ ನಿರ್ವಹಣಾಧಿಕಾರಿ ಜಯಮ್ಮ ಹಾಗೂ ಉತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉತ್ಸವದಲ್ಲಿ ಮುಂದಾಳತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.