ದಕ್ಷಿಣ ಕನ್ನಡ

ಇಂದು ಪಂಜೆ ಸಾಹಿತ್ಯೋತ್ಸವ

Published On :

ಬಂಟ್ವಾಳ: ಇಲ್ಲಿನ ಪಾಣೆಮಂಗಳೂರಿನ ಎಸ್ವಿಎಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಪಂಜೆ ಸಾಹಿತ್ಯೋತ್ಸವ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ ಪ್ರೊ. ಅನಂತ ಪದ್ಮನಾಭ ರಾವ್ ತಿಳಿಸಿದ್ದಾರೆ. ಈ ಸಮ್ಮೇಳನದ ಅಧ್ಯಕ್ಷತೆಯನ್ನು ಲೊರೆಟ್ಟೋ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸೌಭಾಗ್ಯ ವಹಿಸಿಕೊಳ್ಳಲಿರುವರು. ಸಮ್ಮೇಳನವನ್ನು ಪಾಣೆಮಂಗಳೂರು ಎಸ್.ಎಲ್.ಎನ್.ಪಿ. ವಿದ್ಯಾಲಯದ ವಿದ್ಯಾರ್ಥಿ ಚಿನ್ಮಯ ಉದ್ಘಾಟಿಸಲಿರುವವರು
ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಸಮಾರೋಪ ಭಾಷಣ ಮಾಡಲಿರುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಬಂಟ್ವಾಳ ತಾಲೂಕಿನ ಕ.ಸಾ.ಪ. ಅಧ್ಯಕ್ಷ ಜಯಾನಂದ ಪೆರಾಜೆ, ನಿಕಟ ಪೂರ್ವ ಅಧ್ಯಕ್ಷ ಬಿ. ತಮ್ಮಯ, ಎಸ್.ವಿ.ಎಸ್. ಅನುದಾನಿತ. ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕ ಹರಿಶ್ಚಂದ್ರ ಜೈನ್, ಸಂಗಮದ ಸ್ಥಾಪಕರಾದ ಶ್ರೀನಿವಾಸ ರಾವ್, ಸಾವಿತ್ರಿ ಎಸ್. ರಾವ್ ಸಮಾರಂಭದಲ್ಲಿ ಉಪಸ್ಥಿತರಿರುವರು. ಪಂಜೆ ಸಾಹಿತ್ಯಾಧಾರಿತ ಪ್ರಹಸನ, ಚಿತ್ರ  ಚಿತ್ತಾರ, ಕಥಾ ಕವಿತಾ ವಾಚನ, ಹಾಗೂ ನಾಟಕ ಪ್ರದರ್ಶನಗಳು ನಡೆಯಲಿದೆ.  ತಾಲೂಕಿನ 25ಕ್ಕಿಂತ ಮಿಕ್ಕಿ ಶಿಕ್ಷಣ ಸಂಸ್ಥೆಗಳ 500ಕ್ಕಿಂತ ಹೆಚ್ಚು  ಹಿ.ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ  ತಾಲೂಕು ಘಟಕ, ಅಭಿರುಚಿ ಜೋಡುಮಾರ್ಗ, ಸಾಧನಾ ಸಾಂಸ್ಕೃತಿಕ ಪ್ರತಿಷ್ಠಾನ, ಇವರ ಸಂಯುಕ್ತ ಆಶ್ರಯದಲ್ಲಿ ಪಂಜೆ ಸಾಹಿತ್ಯೋತ್ಸವ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.