ಸೌಮ್ಯ ಕೊಲೆ ಖಂಡಿಸಿ ಬೃಹತ್ ಪ್ರತಿಭಟನೆ
ಬಂಟ್ವಾಳ: ಬಾಳ್ತಿಲ ಗ್ರಾಮದ ಸೌಮ್ಯ ಎಂಬಾಕೆಯನ್ನು ಅತ್ಯಾಚಾರಕ್ಕೆ ಯತ್ನಿಸಿ ಅಮಾನವೀಯವಾಗಿ ಕೊಲೆಗೈದಿರುವ ಕೃತ್ಯವನ್ನು ಖಂಡಿಸಿ ಬಿ.ಸಿ. ರೋಡಿನ ತಾಲೂಕು ಕಚೇರಿ ಮುಂಭಾಗ ಬುಧವಾರ ಬೆಳಗ್ಗೆ ಬೃಹತ್ ಖಂಡನಾ ಸಭೆ ನಡೆಯಿತು.
ಪಕ್ಷಭೇದ ಮರೆತು ಒಟ್ಟಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪ್ರಮುಖರು, ಸೌಮ್ಯ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಶಾಸಕ ರಮಾನಾಥ ರೈ ಸಭೆಯನ್ನುದ್ದೇಶಿಸಿ ಮಾತನಾಡಿ, ಹಾಡಹಗಲೇ ಇಂತಹ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಇಂತಹ ಕೃತ್ಯಗಳು ಸಂಪೂರ್ಣ ನಿಲ್ಲಬೇಕು ಎಂದರು. ಸರ್ಕಾರ ಮೃತ ಸೌಮ್ಯಳ ಬಡ ಕುಟುಂಬಕ್ಕೆ ಸಹಾಯಧನ ಒದಗಿಸುವಂತೆ ಒತ್ತಾಯಿಸಿದರು.
ವಕೀಲರೇ ವಕಾಲತ್ತು ಮಾಡಬೇಡಿ: ಮಾಜಿ ಶಾಸಕ ರುಕ್ಮಯ ಪೂಜಾರಿ ಮಾತನಾಡಿ, ಆರೋಪಿ ಪರವಾಗಿ ಯಾವುದೇ ವಕೀಲರು ವಕಾಲತ್ತು ಮಾಡದೆ ಸಹಕರಿಸುವಂತೆ ಮನವಿ ಮಾಡಿದರು. ಈ ಬಗ್ಗೆ ವಕೀಲರ ಸಂಘಕ್ಕೂ ಮನವಿ ಸಲ್ಲಿಸಿ ಮನವರಿಕೆ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಮುಖಂಡ ಹರಿಕೃಷ್ಣ ಬಂಟ್ವಾಳ ಘಟನೆಯನ್ನು ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಮಾತನಾಡಿ, ಆರೋಪಿಗೆ ಕಠಿಣ ಶಿಕ್ಷೆ ಆಗುವವರೆಗೂ ಈ ಹೋರಾಟ ನಡೆಯಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ಆರೋಪಿಯನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣದ ಹಾದಿ ತಪ್ಪಿಸುವ ಹುನ್ನಾರ ನಡೆಯುತ್ತಿದೆ ಎಂದು ಸಭೆಯಲ್ಲಿ ಪಾಲ್ಗೊಂಡ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಸಭೆಯಲ್ಲಿ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಎಂ.ಎಸ್. ಮಹಮ್ಮದ್ ಚೆನ್ನಪ್ಪ ಕೋಟ್ಯಾನ್, ತಾ.ಪಂ. ಉಪಾಧ್ಯಕ್ಷ ಆನಂದ ಶಂಭೂರು, ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲ್ಯಾನ್, ಪ್ರಮುಖರಾದ ಬಿ.ಎಚ್. ಖಾದರ್, ಪದ್ಮನಾಭ ನರಿಂಗಾನ, ಮೋಹನ್ ಸಿ.ಎಸ್,
ಮಾಧವ ಮಾವೆ, ಪುಷ್ಪಾವತಿ ಮತ್ತಿತರರು ಇದ್ದರು.
ಸಭೆಯ ಬಳಿಕ ಜಿ.ಪಂ. ಸದಸ್ಯೆ ಮಮತಾ ಗಟ್ಟಿ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿಗೆ ತೆರಳಿದ ನಿಯೋಗ, ಕೊಲೆ ಆರೋಪಿ ಸತೀಶನಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಹಾಗೂ ಸೌಮ್ಯ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ನೆರವು ನೀಡಬೇಕೆಂದು ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

