ಯಜ್ಞ ಮೂಲಕ ಸಾಮಾಜಿಕ ಪರಿವರ್ತನೆ: ಕನ್ಯಾಡಿ ಶ್ರೀ
ಬೆಳ್ತಂಗಡಿ: ಸಾಮಾಜಿಕ ಯಜ್ಞದ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ. ಅದು ಬ್ರಹ್ಮಕಲಶೋತ್ಸವದಂತಹ ಕಾರ್ಯಕ್ರಮಗಳ ಮೂಲಕವೂ ನಡೆಯುತ್ತದೆ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಹೇಳಿದ್ದಾರೆ.
ಉಜಿರೆಯ ಶ್ರೀಜನಾರ್ದನ ಸ್ವಾಮಿ ದೇವರಿಗೆ 12 ವರ್ಷಗಳ ಬಳಿಕ ನಡೆಯುತ್ತಿರುವ 2ನೇ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಮೊದಲನೇ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಸಮಾಜವನ್ನು ಪ್ರೀತಿಸುವುದರಲ್ಲಿ ಭಗವಂತನನ್ನು ಕಾಣಲು ಸಾಧ್ಯವಿದೆ. ನಿಷ್ಕಾಮ ಕರ್ಮದಿಂದ ಕರ್ತವ್ಯ ಭಾವದಿಂದ ಜೀವನ ಸಾಗಿಸಬೇಕು. ನಿತ್ಯ ನಿರಂತರ ಭಗವಂತನ ಅನುಸಂಧಾನದಿಂದ ಜೀವನ ಪಾವನವಾಗುತ್ತದೆ. ಶ್ರದ್ಧಾ ಕೇಂದ್ರಗಳು ಹೆಚ್ಚಿದಂತೆ ಪರಿಸರದಲ್ಲಿ ಧನಾತ್ಮಕ ಶಕ್ತಿ ಸಂಗ್ರಹವಾಗುತ್ತದೆ. ಹೀಗಾಗಿ ಶ್ರದ್ಧಾಕೇಂದ್ರಗಳು ವ್ಯವಸ್ಥಿತವಾಗಿ ನಡೆಯಬೇಕು ಎಂದು ಸ್ವಾಮೀಜಿ ಹೇಳಿದರು.
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಎಸ್.ಪ್ರಭಾಕರ್ ಇದ್ದರು. ದೇವಳದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ನೆಟ್ನಾಯ ಅಧ್ಯಕ್ಷತೆ ವಹಿಸಿದ್ದರು. ವೇ.ಮೂರ್ತಿ ಹಿರಣ್ಯ ವೆಂಕಟೇಶ್ವರ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಬಾಳಿಗ ಇದ್ದರು.
ಜಿ.ಪಂ. ಮಾಜಿ ಸದಸ್ಯ ಇ.ಸುಂದರ ಗೌಡ ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ, ಅಧ್ಯಾಪಕ ಸೋಮಶೇಖರ ಶೆಟ್ಟಿ ಪ್ರಸ್ತಾವಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿಗಾರ್ ವಂದಿಸಿದರು. ಸಾಹಿತಿ ಪ್ರೊ. ನಾವುಜಿರೆ ನಿರ್ವಹಿಸಿದರು. ಬಳಿಕ ವೇ.ಮೂ. ಹಿರಣ್ಯ ವೆಂಕಟೇಶ್ವರ ಭಟ್ ಅವರಿಂದ ಭಗವದ್ಗೀತಾ ಪ್ರವಚನ ಸರಣಿ ಆರಂಭಗೊಂಡಿತು. ಬ್ರಹ್ಮಕಲಶೋತ್ಸವದ ಮೊದಲ ದಿನವಾದ ಬುಧವಾರ ಬೆಳಗ್ಗೆ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಸುಪ್ರಸಾದ ಭೋಜನ ಶಾಲೆ ಉದ್ಘಾಟಿಸಿದರು. ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ಡಿ.ಹರ್ಷೇಂದ್ರ ಕುಮಾರ್ ಹಸಿರುವಾಣಿ ಉಗ್ರಾಣ ಉದ್ಘಾಟಿಸಿದರು. ಉದ್ಯಮಿ ಕೆ.ಹರೀಶ್ ಕುಮಾರ್ ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವ ಮಾ.4ರತನಕ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

