ದಕ್ಷಿಣ ಕನ್ನಡ

ಸುಳ್ಯ: ಇಂದು ರಂಗಮನೆಯಲ್ಲಿ ರಂಗಸಂಭ್ರಮ

Published On :

ಸುಳ್ಯ: ಇಲ್ಲಿನ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯ 11ನೇ ವರ್ಷದ ರಂಗಸಂಭ್ರಮ 28ರಂದು ಆಳ್ವಾಸ್ ನುಡಿಸಿರಿ ಸುಳ್ಯ ಘಟಕದ ಸಹಕಾರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ರಂಗಮನೆಯಲ್ಲಿ ನಡೆಯಲಿದೆ. ರಂಗಮನೆ ಅಧ್ಯಕ್ಷ ಜೀವನ್ ರಾಂ ಸುಳ್ಯ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಆಳ್ವಾಸ್ ನುಡಿಸಿರಿ ಸುಳ್ಯ ಘಟಕ ಅಧ್ಯಕ್ಷ ಜಾಕೆ ಮಾಧವ ಗೌಡ ಅಧ್ಯಕ್ಷತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಹಕಾರಿ ಸಂಘ ಅಧ್ಯಕ್ಷ ಪಿ.ಬಿ. ದಿವಾಕರ ರೈ, ಅಂಕಣಕಾರ, ಉಪನ್ಯಾಸಕ ಡಾ.ನರೇಂದ್ರ ರೈ ದೇರ್ಲ, ಹಿರಿಯ ಲೇಖಕಿ ಜಯಮ್ಮ ಚೆಟ್ಟಿಮಾಡ, ನಗರ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಕಾಶ್ ಹೆಗ್ಡೆ ಭಾಗವಹಿಸಲಿದ್ದಾರೆ. ರಂಗಭೂಮಿ ಮತ್ತು ಸಾಹಿತ್ಯ ಕ್ಷೇತ್ರದ ಸಾಧಕಿ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕಿ ವೈದೇಹಿ ಈ ವರ್ಷದ ರಂಗಮನೆ ಗೌರವ ಸಮ್ಮಾನ ಸ್ವೀಕರಿಸಲಿದ್ದಾರೆ.
ಕೆ. ಕೃಷ್ಣಮೂರ್ತಿ, ವೈ.ವಿ. ಫಾಲಚಂದ್ರ ಗೋಷ್ಠಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.