ದಕ್ಷಿಣ ಕನ್ನಡ

ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು

Published On :

ಬಂಟ್ವಾಳ: ಖಾಸಗಿ ಕಟ್ಟಡವೊಂದರಲ್ಲಿ ಪೈಂಟಿಗ್ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಸಜಿಪಮುನ್ನೂರು ಗ್ರಾಮದ ನಂದಾವರ ನಿವಾಸಿ ಅಯ್ಯೂಬ್ (18) ಮೃತರು. ಅಯ್ಯೂಬ್ ಅವರು ಗುರುವಾರ ತನ್ನ ನೆರೆಮನೆಯ ಮಹಮ್ಮದ್ ಯಾನೆ ಮೋನಾಕ ಎಂಬವರ ಜೊತೆ ಗೋಳ್ತಮಜಲು ಹಜಾಜ್ ಇಂಡಸ್ಟ್ರೀಸ್‌ನ ಕಟ್ಟಡಕ್ಕೆ ಪೈಂಟಿಗ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸಂಜೆ 4.30 ರ ಸುಮಾರಿಗೆ ಅಯ್ಯೂಬ್ ಕಟ್ಟಡದ ಮೇಲ್ಭಾಗದಲ್ಲಿ ಪೈಂಟಿಗ್ ಮಾಡುತ್ತಿದ್ದ ವೇಳೆ ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ತಗಲಿದ್ದು, ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಘಟನೆಯ ತೀವ್ರತೆಗೆ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಬಿ.ಸಿ. ರೋಡಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಅಯ್ಯೂಬ್ ತಂದೆ ಅಬ್ದುಲ್ಲ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.