ವಿಟ್ಲ ದೇವಸ್ಥಾನ: ಇಂದು ಬ್ರಹ್ಮಕಲಶಾಭಿಷೇಕ
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕೊನೆಯ ದಿನವಾದ ಸೋಮವಾರ ಬೆಳಗ್ಗೆ ಮಹಾಗಣಪತಿ ಹೋಮ, ಕವಾಟ ಉದ್ಘಾಟನೆ, ತೈಲಾಭಿಷೇಕ, ಉಷ- ಪೂಜೆ, ಪ್ರೋಕ್ತ ಕಲಶಾಭಿಷೇಕ, ಪ್ರಾಯಶ್ಚಿತ್ತ ಕಲಶಾಭಿಷೇಕ, ಶಾಂತಿ ಕಲಶಾಭಿಷೇಕ, ತತ್ತ್ವಕಲಶಾಭಿಷೇಕ, ಮಹಾ ಬಲಿ ಪೀಠ ಪ್ರತಿಷ್ಠೆ, ಧ್ವಜ ಪ್ರತಿಷ್ಠೆ, ಶ್ರೀ ಪಂಚಲಿಂಗೇಶ್ವರನಿಗೆ ಕರ್ಪೂರಾದಿ ಪರಿಕಲಶಾಭಿಷೇಕ, ಕುಂಭೇಶ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಸಾಂಸ್ಕೃಕ ಮಂಟಪದಲ್ಲಿ ಸಂಜೆ 4ರಿಂದ ವಿದುಷಿ ಉಷಾ ಈಶ್ವರ ಭಟ್ ಅವರಿಂದ ಸಂಗೀತ, ಪಿ.ಕೆ. ಗಣೇಶ್ ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ವಾದನ, ಪುತ್ತೂರು ನರಸಿಂಹ ನಾಯಕ್ ಬಳಗದವರಿಂದ ದಾಸವಾಣಿ, ರಾತ್ರಿ ಮುಂಬಯಿ ರಂಗಭೂಮಿ ಫೈನ್ ಆರ್ಟ್ಸ್ ಅವರಿಂದ ಸತ್ಯಹರಿಶ್ಚಂದ್ರ ಪೌರಾಣಿಕ ತುಳು ನಾಟಕ ಪ್ರದರ್ಶನಗೊಳ್ಳಲಿದೆ.
ಸಂತ ದರ್ಶನ ಕಾರ್ಯಕ್ರಮದಲ್ಲಿ ಪಂಚಾಕ್ಷರಿ ಸ್ಮರಣ ಸಂಚಿಕೆ ಬಿಡುಗಡೆ ನಡೆಯಲಿದ್ದು, ಮಾರ್ಗದರ್ಶಕ ಯತಿಗಳಾದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು, ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ, ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದಂಗಳವರು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಜರಿರುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

