27ರಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಸುಬ್ರಹ್ಮಣ್ಯ: ಏನೆಕಲ್ನಲ್ಲಿ ಸುಳ್ಯ ತಾಲೂಕು ಮಟ್ಟದ 18ನೇ ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತಿ ಡಾ.ಎಚ್.ಎಂ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ 27ರಂದು ಏನೆಕಲ್ನ ಅರ್ಪಣಾ ಕ್ರೀಡಾಂಗಣದಲ್ಲಿ ಜರುಗಲಿದೆ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಎಂ. ಮೀನಾಕ್ಷಿ ಗೌಡ ತಿಳಿಸಿದರು.
ಏನೆಕಲ್ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ 18ನೇ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಜಿ.ಪಂ. ಸದಸ್ಯ ಕೆ.ಎಸ್. ದೇವರಾಜ್ ಬಿಡುಗಡೆಗೊಳಿಸಿದರು.
ನಂತರ ಸುದ್ದಿಗೋಷ್ಠಿಯಲ್ಲಿ ಮೀನಾಕ್ಷಿ ಗೌಡ ಮಾತನಾಡಿ, ಬೆಳಗ್ಗೆ 9 ಗಂಟೆಗೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸ್ವಾಗತ ಗೋಪುರದಿಂದ ತೆರೆದ ವಾಹನದಲ್ಲಿ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆ ಮೂಲಕ ಸಮ್ಮೇಳನಕ್ಕೆ ಕರೆತರಲಾಗುವುದು. ಮೆರವಣಿಗೆಯನ್ನು ಜಿ.ಪಂ. ಸದಸ್ಯ ಕೆ.ಎಸ್. ದೇವರಾಜ್ ಉದ್ಘಾಟಿಸಲಿದ್ದಾರೆ. ಕನ್ನಡ ಧ್ವಜಾರೋಹಣವನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ನೆರವೇರಿಸಲಿದ್ದು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಎಂ. ಮೀನಾಕ್ಷಿ ಗೌಡ ಪರಿಷತ್ನ ಧ್ವಜಾರೋಹಣ ಮಾಡಲಿದ್ದಾರೆ ಎಂದರು. ಸಮ್ಮೇಳನದಲ್ಲಿ ವಿವಿಧ ಪುರಾತನ ವಸ್ತುಗಳ ಹಾಗೂ ಅನೇಕ ಸಾಹಿತಿಗಳ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆಗಳಿದ್ದು, ವಸ್ತು ಪ್ರದರ್ಶನವನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು ಉದ್ಘಾಟಿಸಲಿದ್ದಾರೆ. ಪುಸ್ತಕ ಪ್ರದರ್ಶನವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣ ಪ್ರಸಾದ್ ಮಡ್ತಿಲ ಅನಾವರಣಗೊಳಿಸಲಿದ್ದಾರೆ ಎಂದರು.
18ನೇ ಸುಳ್ಯ ತಾಲೂಕು ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ನ ರಾಜ್ಯಾಧ್ಯಕ್ಷ ಪುಂಡಲೀಕ ಹಾಲಂಬಿ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಮಂಗಳೂರು ಆಕಾಶವಾಣಿಯ ಮುಖ್ಯಸ್ಥ ಡಾ. ವಸಂತಕುಮಾರ ಪೆರ್ಲ ಬಿಡುಗಡೆಗೊಳಿಸಲಿದ್ದಾರೆ. ಹೊಸಕೃತಿಗಳ ಅನಾವರಣವನ್ನು ಜಿಲ್ಲಾ ವಾರ್ತಾಧಿಕಾರಿ ರೋಹಿಣಿ .ಕೆ ನೆರವೇರಿಸಲಿದ್ದು, ಶಾಸಕ ಎಸ್. ಅಂಗಾರ, ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ದೇವರಗದ್ದೆ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಜಿ.ಎಸ್. ಉಬರಡ್ಕ ಮುಖ್ಯ ಅತಿಥಿಗಳಾಗಿದ್ದಾರೆ ಎಂದರು.
ಉದ್ಘಾಟನಾ ಸಮಾರಂಭದ ಬಳಿಕ ಗೀತಗಾಯನವನ್ನು ಹರಿಹರ ಬಾಯಾಡಿಯವರ ಶಿಷ್ಯೆಯರಾದ ಸ್ವಾತಿ ರೈ ಮತ್ತು ಅಪರ್ಣಾ ಪ್ರಸ್ತುತ ಪಡಿಸಲಿದ್ದಾರೆ. ನಂತರ ಮಾತಿನ ಮಂಟಪ ನೆರವೇರಲಿದೆ. ನಂತರ ರಂಗಕರ್ಮಿ ಪ್ರಸಾದ್ ರಕ್ಷದಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನಾಧ್ಯಕ್ಷರ ಕೃತಿಗಳ ಸಾಹಿತ್ಯ ಗೋಷ್ಠಿಯಲ್ಲಿ ಡಾ. ಪೂವಪ್ಪ ಕಣಿಯೂರು, ಮಮತಾ ಬಿ.ಎಸ್., ಪ್ರಬಂಧ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು. ಡಾ. ನಂದಾ ಕುಮಾರಸ್ವಾಮಿ, ಅನುರಾಧ ಕುರುಂಜಿ, ಶೈಲಜಾ ದಿನೇಶ್, ಲತಾಶ್ರೀ ಸುಪ್ರೀತ್, ಬಲ್ಲೇನಹಳ್ಳಿ ಮಂಜುನಾಥ್, ಲೀಲಾಕುಮಾರಿ ತೊಡಿಕಾನ, ಶಿವಾನಂದ ರಂಗಮತ್ತಲೆ, ನಿರಂಜನ ಆಚಾರ್ಯ ಕಡ್ಲಾರು, ಜ್ಯೋತಿ ಚೆಟ್ಟಿಮಾಡ, ಪ್ರವೀಣ್ ಕಾಟೂರು ಅವರು ಸತ್ಯನ್ ದೇರಾಜೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ತಮ್ಮ ಕವನಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸವಣೂರು ಸೀತಾರಾಮ ರೈ, ಸಮ್ಮೇಳನದ ಗೌರವಾಧ್ಯಕ್ಷ ಕೆ.ಎಸ್. ದೇವರಾಜ್,ಪೋಷಕಾಧ್ಯಕ್ಷ ಗಣೇಶ್ ಪ್ರಸಾದ್ .ಎನ್, ಅಧ್ಯಕ್ಷ ಕಾರ್ಯಪ್ಪ ಗೌಡ .ಪಿ.ಎಸ್, ಉಪಾಧ್ಯಕ್ಷ ತುಕಾರಾಮ್ ಏನೆಕಲ್, ಮನೋಹರ ನಾಳ, ಪ್ರಧಾನ ಕಾರ್ಯದರ್ಶಿ ಶಿವರಾಮ್ ಏನೆಕಲ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯದರ್ಶಿ ಗಣೇಶ್ ಭಟ್ ಹಾಗೂ ಮಹಾಲಕ್ಷ್ಮೀ ಕೊರಂಬಟ್ನ, ಕೋಶಾಧಿಕಾರಿ ಹಾಗೂ ಜಿ.ಪಂ. ಸದಸ್ಯೆ ಆಶಾ ತಿಮ್ಮಪ್ಪ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

