ದಕ್ಷಿಣ ಕನ್ನಡ

ಬಾವಿ ಹಗ್ಗ ಆಕಸ್ಮಿಕವಾಗಿ ಸುತ್ತಿ ಮಹಿಳೆ ಸಾವು

Published On :

ಪಡುಬಿದ್ರಿ: ಬಾವಿಯ ಹಗ್ಗ ಆಕಸ್ಮಿಕವಾಗಿ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ನಡ್ಸಾಲು ಗ್ರಾಮದಲ್ಲಿ ನಡೆದಿದೆ. ಮೃತರು ಭುವನೇಶ್ವರಿ(35), ಈಕೆ ಇಲ್ಲಿನ ಪಿ.ಕೆ. ಮೊಯ್ದಿನ್ ಕಾಂಪೌಂಡಿನ ನಿವಾಸಿ ಮುರುಗನ್ ಎಂಬವರ ಪತ್ನಿ.
ಜ.6ರಂದು ಮನೆಯ ಬಾವಿಯಿಂದ ನೀರನ್ನು ಎಳೆಯುತ್ತಿರುವಾಗ ಆಕಸ್ಮಿಕವಾಗಿ ಹಗ್ಗ ಕೈಯಿಂದ ಜಾರಿ ಕೊಡಪಾನ ಬಾವಿಯೊಳಗೆ ಬಿತ್ತು. ಆ ವೇಗಕ್ಕೆ ಮೇಲಕ್ಕೆ ಕಟ್ಟಲಾಗಿದ್ದ ಹಗ್ಗದ ಇನ್ನೊಂದು ತುದಿ ಅವರ ಕುತ್ತಿಗೆಗೆ ಸುತ್ತಿಕೊಂಡು ಬಿಗಿದು ಉಸಿರುಗಟ್ಟಿ ಮೂರ್ಛೆ ತಪ್ಪಿ ಬಿದ್ದುಬಿಟ್ಟರು. ತಕ್ಷಣ ಅವರನ್ನು ಸ್ಥಳೀಯ ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ  ದಾಖಲಿಸಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪತಿ ಮುರುಗನ್ ನೀಡಿದ ದೂರಿನಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.