ದಕ್ಷಿಣ ಕನ್ನಡ

27ರಂದು ಹಿರಿಯ ನಾಗರಿಕರ ಸಮಾವೇಶ

Published On :

ಪುತ್ತೂರು: ಹಿರಿಯ ನಾಗರಿಕರನ್ನು ಪ್ರಬಲ ಶಕ್ತಿಯಾಗಿ ರೂಪಿಸುವ ಹಾಗೂ ಅವರ ಮನೋಸ್ಥೈರ್ಯವನ್ನು ಉದ್ದೀಪನಗೊಳಿಸುವ ಉದ್ದೇಶದಲ್ಲಿ ಪುತ್ತೂರಿನ ಹಿರಿಯ ನಾಗರಿಕ ಹಿತಕ್ಷಣಾ ವೇದಿಕೆ ಮತ್ತು ಪರಿವರ್ತನಾ ಸೇವಾ ಟ್ರಸ್ಟ್ ವತಿಯಿಂದ ತಾಲೂಕಿನ ಹಿರಿಯ ನಾಗರಿಕರ ಸಮಾವೇಶವು 27ರಂದು ದರ್ಬೆಯಲ್ಲಿರುವ ಪುಷ್ಪಾಂಜಲಿ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಎಸ್. ಕುಲಾಲ್ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶವನ್ನು ದ.ಕ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೊರಗಪ್ಪ ನಾಯ್ಕ ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಶಕುಂತಳಾ, ಕೆ.ಎಂ.ಸಿ ಮೆಡಿಸಿನ್ ವಿಭಾಗದ ಮುಖ್ಯಸ್ಥೆ ಡಾ. ಪ್ರಭಾ ಅಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಪ್ರಸನ್ನ, ಮಾಜಿ ಶಾಸಕ ರಾಮಭಟ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಹಿತರಕ್ಷಣಾ ಸಂಘದ ವತಿಯಿಂದ ಹಲವಾರು ಯೋಜನೆಗಳನ್ನು ರೂಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ನಾಗರಿಕಾ ಹಿತರಕ್ಷಣಾ ವೇದಿಕೆಯ ಉಪಾಧ್ಯಕ್ಷ ರಾಮಯ್ಯ ನಾಯ್ಕ, ಖಜಾಂಜಿ ಕೆ.ಸಿ. ಜನಾರ್ದನ, ಪರಿವರ್ತನಾ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಸುಗುಣ ಶೆಟ್ಟಿ, ಖಜಾಂಜಿ ಶಶಿಕಲಾ ದಿನೇಶ್, ಸಂಯೋಜಕ ಕಡಮಜಲು ಸುಭಾಷ್ ರೈ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.