ಶೆಟಲ್ ಬಸ್ ಸಮಸ್ಯೆ: ಪ್ರತಿಭಟನೆ ಎಚ್ಚರಿಕೆ
ಸುಂಟಿಕೊಪ್ಪ: ರಾಜ್ಯ ರಸ್ತೆ ಸಾರಿಗೆ ನಿಗಮದ ಮಡಿಕೇರಿ ಡಿಪೋದಿಂದ ಮಡಿಕೇರಿ- ಸುಂಟಿಕೊಪ್ಪ- ಕುಶಾಲನಗರ ನಡುವೆ ಸಂಚರಿಸುತ್ತಿರುವ ಶೆಟಲ್ ಬಸ್ಗಳ ಅಸಮರ್ಪಕ ಸೇವೆಯಿಂದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ಕೊಡಗು ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಎ. ಉಸ್ಮಾನ್ ಆರೋಪಿಸಿದ್ದಾರೆ.
ಮೇಲಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸಂಘದ ವತಿಯಿಂದ ಬಸ್ ಡಿಪೋಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.
ಶಾಲೆ ಬಿಡುವ ಸಮಯದಲ್ಲಿ ಶೆಟಲ್ ಬಸ್ಗಳು ನಿಲುಗಡೆಗೊಂಡಿದ್ದರೂ ವಿದ್ಯಾರ್ಥಿಗಳನ್ನು ಕಂಡೊಡನೆ ಹತ್ತಿಸಿಕೊಳ್ಳದೆ ಕಾಲ್ಕೀಳುತ್ತಾರೆ. ಈ ಬಗ್ಗೆ ಡಿಪೋ ವ್ಯವಸ್ಥಾಪಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಂಥವರಿಗೆ ಸೂಕ್ತ ಸೂಚನೆ ನೀಡಿ ಸಮಸ್ಯೆ ಪರಿಹರಿಸದಿದ್ದರೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರನ್ನು ಸಂಘಟಿಸಿ ಮಡಿಕೇರಿ ಬಸ್ ಡಿಪೋಗೆ ಮುತ್ತಿಗೆ ಹಾಕಲಾಗುವುದು ಎಂದು ಉಸ್ಮಾನ್ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

