ಬಂಟ್ವಾಳ: ರಕ್ತದೊತ್ತಡದಿಂದ ಬಳಲುತ್ತಿದ್ದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇರ್ವತ್ತೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಇಲ್ಲಿನ ಬಿ.ಎಸ್.ನಗರ ನಿವಾಸಿ ಸುರೇಶ್ ಎಂಬವರ ಪತ್ನಿ ವಿಮಲ (45) ಮೃತರು. ಕಳೆದ ಹಲವು ವರ್ಷಗಳಿಂದ ಇವರು ರಕ್ತದೊತ್ತಡದಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾದರೂ ಫಲಕಾರಿಯಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ಮೃತರ ಪುತ್ರಿ ಬಿಂದಿಯಾ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.