ದಕ್ಷಿಣ ಕನ್ನಡ

ಹೊರಬಂದ ನಾಲ್ಕೇ ದಿನದಲ್ಲಿ ಮತ್ತೆ ಜೈಲಿಗೆ

Published On :

ಮಂಗಳೂರು: ಜೈಲಿನಿಂದ ಹೊರಬಂದ ನಾಲ್ಕೇ ದಿನದಲ್ಲಿ ಆರೋಪಿ ಮತ್ತೆ ಕಳವು ಸೊತ್ತಿನ ಮಾರಾಟಕ್ಕೆ ಹೋಗಿ ಸಿಕ್ಕಿಬಿದ್ದು ಜೈಲು ಪಾಲಾದ ಘಟನೆ ಮಂಗಳೂರಿನ ಕದ್ರಿಯಲ್ಲಿ ಬುಧವಾರ ನಡೆದಿದೆ. ಆರೋಪಿ ವಿನ್ಸಿ ಯಾನೆ ವಿನ್ಸೆಂಟ್ ಚಿನ್ನಾಭರಣ ಕಳವು ಪ್ರಕರಣದಲ್ಲಿ ಮಂಗಳೂರಿನ ಜೈಲಿನಲ್ಲಿದ್ದರು.
  ಜ.19ರಂದು ಜೈಲಿನಿಂದ ಜಾಮೀನಿನಲ್ಲಿ ಹೊರಬಂದಿದ್ದನು. ಇನ್ನೂ ನಾಲ್ಕು ದಿನ ಕಳೆದಿಲ್ಲ, ಆಗಲೇ 2 ಚಿನ್ನದ ಸರವನ್ನು ಹಿಡಿದುಕೊಂಡು ಸಹಚರ ನವೀನ್ ಜತೆ ಕದ್ರಿಯ ಫೈನಾನ್ಸ್‌ನಲ್ಲಿ ಅಡವಿರಿಸಲು ಹೋಗುತ್ತಿದ್ದುದು ಪೊಲೀಸರ ಗಮನಕ್ಕೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ವಿನ್ಸೆಂಟ್‌ನ್ನು ಮತ್ತೆ ಬಂಧಿಸಿ ಜೈಲಿಗೆ ಕಳುಹಿಸಿದರು. ಈತನ ವಿರುದ್ಧ ಉರ್ವ ಹಾಗೂ ಕದ್ರಿಯಲ್ಲಿ 2 ಪ್ರಕರಣವಿದ್ದು, ಒಟ್ಟು 3 ಪ್ರಕರಣ ದಾಖಲಾಗಿತ್ತು. ಈತನಿಂದ ರು. 1.30 ಲಕ್ಷ ಮೌಲ್ಯದ 43 ಗ್ರಾಂ ಚಿನ್ನಾಭರಣವನ್ನು ವಶಪಡಿಸಲಾಗಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.