ದಕ್ಷಿಣ ಕನ್ನಡ

ಜಾನುವಾರು ವಶ

Published On :

ಕುಂದಾಪುರ: ಅಕ್ರಮವಾಗಿ ಮಾಂಸಕ್ಕಾಗಿ ಜಾನುವಾರುಗಳನ್ನು ಕಡಿಯುತ್ತಿದ್ದ ಇಲ್ಲಿನ ನೇರಳಕಟ್ಟೆ ಸಮೀಪದ ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿನ ಕಾಡಿಗೆ ಶುಕ್ರವಾರ ಪೊಲೀಸರು ದಾಳಿ ನಡೆಸಿ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಆರೋಪಿಗಳು ಮಾತ್ರ ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ನಿವಾಸಿ ಅಬೂಬಕ್ಕರ್ ಎನ್ನುವವರಿಗೆ ಸೇರಿದ ಈ ಕಾಡಿನಲ್ಲಿ ಕಳೆದ ಕೆಲ ದಿನಗಳಿಂದ ಅಕ್ರಮವಾಗಿ ಜಾನುವಾರುಗಳನ್ನು ಹಿಡಿದು ತಂದು ಮಾಂಸಕ್ಕಾಗಿ ಕಡಿಯಲಾಗುತ್ತಿದೆ ಎಂಬ ಖಚಿತ ಮಾಹಿತಿಯಂತೆ ಕುಂದಾಪುರ ಅಪರಾಧ ವಿಭಾಗದ ಉಪನಿರೀಕ್ಷಕಿ ರೇವತಿ ಹಾಗೂ ಸಿಬ್ಬಂದಿ ಶುಕ್ರವಾರ ಮಧ್ಯಾಹ್ನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅಕ್ರಮವಾಗಿ ಕಟ್ಟಿ ಹಾಕಲಾಗಿದ್ದ 10  ಗಂಡು ಕರುಗಳನ್ನು, ತೂಕದ ಯಂತ್ರ, ಆಯುಧ ಮತ್ತು ಕೊಲ್ಲಲಾದ ಜಾನುವಾರಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಅಕ್ರಮದ ಆರೋಪಿಗಳಾದ ಸಮ್ಮದ್, ಅಬುಬಕರ್ ಸೇರಿದಂತೆ ಇನ್ನೋರ್ವ ತಪ್ಪಿಸಿಕೊಂಡಿದ್ದು ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.