ಇಂದು ಎಚ್ಸಿಎಲ್ ಕ್ರಿಕೆಟ್ ಪಂದ್ಯಾಟ
ಬೆಳ್ತಂಗಡಿ: ಬೆಂಗಳೂರು ಪ್ರೆಸ್ ಕ್ಲಬ್- 11 ಮತ್ತು ಚಿತ್ರನಟ ಸುದೀಪ್- 11 ತಂಡಗಳ ನಡುವಿನ ಎಚ್.ಸಿ.ಎಲ್. ಕ್ರಿಕೆಟ್ ಪಂದ್ಯಾಟ ಭಾನುವಾರ ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂದ್ಯಾಟಕ್ಕೆ ಕ್ರೀಡಾಂಗಣವನ್ನು ಅಭೂತಪೂರ್ವವಾಗಿ ಸಿದ್ಧಪಡಿಸಲಾಗಿದ್ದು, ಬೆಳಗ್ಗೆ 8.45 ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ. ಎಸ್ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅತಿಥಿಗಳಾಗಿರುತ್ತಾರೆ.
ಮಧ್ಯಾಹ್ನ ನಡೆಯುವ ಪ್ರಶಸ್ತಿ ವಿತರಣಾ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಆರ್. ಅಶೋಕ್ ಹಾಗೂ ಸಣ್ಣ ಕೈಗಾರಿಕಾ ಸಚಿವ ರಾಜೂಗೌಡ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿ, ಬಹುಮಾನ ವಿತರಿಸಲಿದ್ದಾರೆ.
ಈ ಕ್ರೀಡಾಂಗಣದಲ್ಲಿ ಇದೇ ಪ್ರಥಮ ಬಾರಿಗೆ ಚಿತ್ರನಟರೊಂದಿಗೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದು, ಇದಕ್ಕಾಗಿ ವಿಶೇಷ ಪಿಚ್ ರಚಿಸಲಾಗಿದೆ. ವೀಕ್ಷಕರ ಅನುಕೂಲಕ್ಕಾಗಿ ಕ್ರೀಡಾಂಗಣದ ಸುತ್ತಲೂ ಶಾಮಿಯಾನ ಹಾಕಲಾಗಿದೆ. ಕೋಲ್ಕತ್ತಾದಲ್ಲಿ ಮುಂದಿನ ತಿಂಗಳು ನಡೆಯಲಿರುವ ಮಹತ್ವದ ಸಿಸಿಎಲ್ ಮ್ಯಾಚ್ಗೆ ಪೂರಕವಾಗಿ ಉಜಿರೆಯಲ್ಲಿ ಅಭ್ಯಾಸ ಪಂದ್ಯದ ರೀತಿಯಲ್ಲಿ ಎಚ್.ಸಿ.ಎಲ್. ನಡೆಯಲಿದೆ. ಕೋಲ್ಕತ್ತಾದಲ್ಲಿ ದಕ್ಷಿಣ ಭಾರತ ಚಲನಚಿತ್ರರಂಗದ ಎಲ್ಲ ತಾರೆಯರ ನಡುವೆ ಸಿಸಿಎಲ್ ಟೂರ್ನಿ ನಡೆಯಲಿದ್ದು, ಈಗಾಗಲೇ ಎರಡು ಬಾರಿ ಸಿಸಿಎಲ್ ರನ್ನರ್ಅಪ್ ಆಗಿ ಗುರುತಿಸಿಕೊಂಡಿರುವ ಕರ್ನಾಟಕ ಬುಲ್ಡೋಜರ್ ತಂಡಕ್ಕೆ ಇದು ಮಹತ್ವದ ಪಂದ್ಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

