ದಕ್ಷಿಣ ಕನ್ನಡ

ಗಂಗೊಳ್ಳಿಯಲ್ಲಿ ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್

Published On :

ಕುಂದಾಪುರ: ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಹಾಗೂ ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಕಾರದೊಂದಿಗೆ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ 39ನೇ ವರ್ಷಾಚರಣೆ ಪ್ರಯುಕ್ತ ಫೆ.10 ರಂದು ರಾಜ್ಯಮಟ್ಟದ ಪುರುಷರ ಡಬಲ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಎಸ್.ಆರ್.ಎಸ್.ಸಿ. ಟ್ರೋಫಿ-2013 ಗಂಗೊಳ್ಳಿ ಸ.ವಿ. ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ನೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಥಮ ಸ್ಥಾನ ಪಡೆವ ತಂಡಕ್ಕೆ ರು. 8888 ನಗದು ಮತ್ತು ಶಾಶ್ವತ ಫಲಕ, ದ್ವಿತೀಯ ಸ್ಥಾನ ಪಡೆವ ತಂಡಕ್ಕೆ ರು. 5555 ನಗದು ಮತ್ತು ಶಾಶ್ವತ ಫಲಕ, ತೃತೀಯ ಸ್ಥಾನ ಪಡೆವ ತಂಡಕ್ಕೆ ರು. 3333 ನಗದು, ಚತುರ್ಥ ಸ್ಥಾನ ಪಡೆವ ತಂಡಕ್ಕೆ ರು. 2222 ನಗದು ಹಾಗೂ ಕ್ವಾರ್ಟರ್ ಫೈನಲ್ ಪರಾಜಿತ ತಂಡಕ್ಕೆ ರು. 1 ಸಾವಿರ ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಳಿಗಾಗಿ ಅಶ್ವಿನ್ ನಾಯಕ್ (9341035651), ನಾಗೇಶ ಪೈ (9844495891) ಅಥವಾ ಗಣೇಶ ಶೆಣೈ (9008979520) ಸಂಪರ್ಕಿಸಬಹುದು ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.