ದಕ್ಷಿಣ ಕನ್ನಡ

ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಉಳಿಸಿ- ಬೆಳೆಸಿ: ಬೋಪಯ್ಯ

Published On :

ಮಡಿಕೇರಿ: ವಿಶಿಷ್ಟ ಹಾಗೂ ವಿಭಿನ್ನ ಸಂಸ್ಕೃತಿ, ಆಚಾರ ವಿಚಾರ ಮತ್ತು ಪದ್ಧತಿಗಳನ್ನು ಒಳಗೊಂಡಿರುವ ಅರೆಭಾಷೆ ಸಂಸ್ಕೃತಿ, ಸಾಹಿತ್ಯವನ್ನು ಉಳಿಸಿ ಬೆಳೆಸಲು ಎಲ್ಲ ಅರೆಭಾಷಿಕರೂ ಪ್ರಯತ್ನಿಸಬೇಕಿದೆ ಎಂದು ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಕರೆ ನೀಡಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆದ ಅರೆಭಾಷೆ ಜನಾಂಗ ಸೌಹಾರ್ದ ಕೂಟ ಹಾಗೂ ಅರೆಭಾಷೆ ಚಿಂತನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಿದೆ. ಅಕಾಡೆಮಿ ಸಮರ್ಪಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವತ್ತ ಗಂಭೀರ ಚಿಂತನೆ ಮಾಡಬೇಕು. ಅರೆಭಾಷೆ ಅಕಾಡೆಮಿ ಸದಸ್ಯರು ಅಧ್ಯಕ್ಷರಿಗೆ ಸಲಹೆ, ಸಹಕಾರ ಮತ್ತು ಮಾರ್ಗದರ್ಶನ ಮಾಡಿಕೊಂಡು ಅರೆಭಾಷೆ ಬೆಳವಣಿಗೆಗೆ ಶ್ರಮಿಸಬೇಕು ಎಂದು ಬೋಪಯ್ಯ ಸಲಹೆ ನೀಡಿದರು.
ಅರೆಭಾಷೆ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳನ್ನು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಬೇಕು. ಆ ದಿಸೆಯಲ್ಲಿ ಮುಂದೆ ಯಾವ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂಬ ಬಗ್ಗೆ ಚಿಂತನೆ ನಡೆಯಬೇಕು. ಅಧ್ಯಕ್ಷರು, ಸದಸ್ಯರು ಜತೆಗೆ ಇತರ ಅರೆಭಾಷಿಕರ ಸಲಹೆ ಸಹಕಾರ ಪಡೆದು ಉತ್ತಮ ಯೋಜನೆಗಳನ್ನು ರೂಪಿಸಬೇಕು. ಕರ್ನಾಟಕ ಅರೆಭಾಷೆ ಅಕಾಡೆಮಿಯ ಯೋಜನೆಗಳು ಮುಂದಿನ ಪೀಳಿಗೆಗೆ ದಿಕ್ಸೂಚಿಯಾಗಬೇಕು. ಇದಕ್ಕಾಗಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಮದೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ  ಬಾರಿಯಂಡ ಆರ್. ಜೋಯಪ್ಪ ಅರೆಭಾಷೆ ಹುಟ್ಟು ಮತ್ತು ಬೆಳವಣಿಗೆ ಕುರಿತು ಮಾತನಾಡಿ, ಅಕಾಡೆಮಿಯು ಅರೆಭಾಷೆಯಲ್ಲಿ ಶಬ್ದಕೋಶ ರಚನೆಗೆ ಮುಂದಾಗಬೇಕು. ಜತೆಗೆ ಕವಿಗೋಷ್ಠಿಗಳನ್ನು ಆಯೋಜಿಸಬೇಕು ಎಂದು ಹೇಳಿದರು.
ಪುತ್ತೂರು ಇಂಡಸ್ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ಬೆಂಗಳೂರು ವಿಭಾಗೀಯ ಕಚೇರಿಯ ಹೆಚ್ಚುವರಿ ಆಯುಕ್ತ ಡಾ.ಕರ್ಣಯ್ಯನ ಅಪ್ಪಯ್ಯ ಮಾತನಾಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಹುಟ್ಟಿನ ಬಗ್ಗೆ ರಾಜೇಶ್ ಪವರ್ ಪಾಯಿಂಟ್ ಪ್ರೆಜೆಂಟೇಷನ್ ಮೂಲಕ ಮಾಹಿತಿ ನೀಡಿದರು.
ಸುಳ್ಯ ಕುರುಂಜಿ ವೆಂಕಟರಮಣ ಗೌಡ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ನಿಡ್ಯಮಲೆ ಎ. ಜ್ಞಾನೇಶ್, ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ಡಾ.ಕೋರನ ಸರಸ್ವತಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎನ್.ಎಸ್. ದೇವಿಪ್ರಸಾದ್, ರಿಜಿಸ್ಟ್ರಾರ್ ಎನ್. ಶಾಂತಮ್ಮ, ಪದ್ಮಾ ಕೊಲ್ಜಾರ್, ಬೈತಡ್ಕ ಜಾನಕಿ ಮತ್ತಿತರರು ಇದ್ದರು.
ತುಂತಜೆ ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸದಸ್ಯ ತಳೂರು ಕಿಶೋರ್ ಕುಮಾರ್ ಸ್ವಾಗತಿಸಿದರು, ಶಿಕ್ಷಕಿ ರೇವತಿ ರಮೇಶ್, ತುಳಸಿ ಮೋಹನ್ ಮತ್ತು ಹೊಸೂರು ಕಾವ್ಯ ಪ್ರಾರ್ಥಿಸಿದರು. ಕೋರನ ಸುನಿಲ್ ನಿರೂಪಿಸಿದರು, ಅಮೆ ಪಾಲಕ್ಷ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.