ದಕ್ಷಿಣ ಕನ್ನಡ

ಮಾಲಂಬಿ ಶಾಲೆ ಮುಖ್ಯ ಶಿಕ್ಷಕರ ಕೊಠಡಿ ಉದ್ಘಾಟನೆ

Published On :

ಶನಿವಾರಸಂತೆ: ಇಲ್ಲಿನ ಸಮೀಪದ ಮಾಲಂಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರ ಕೊಠಡಿಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷ ಸೋಮಯ್ಯ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ಡಿ.ಬಿ. ಧರ್ಮಪ್ಪ ಉದ್ಘಾಟಿಸಿದರು.
ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಅಧ್ಯಕ್ಷ ಸೋಮಯ್ಯ, ಇಂದು ಸರ್ಕಾರ ವಿವಿಧ ಯೋಜನೆಗಳಿಂದ ಶಾಲೆಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿದೆ.  ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು, ಮಕ್ಕಳನ್ನು ಶಾಲೆಗೆ ಸೇರಿಸದ ತಕ್ಷಣ ಪೋಷಕರು ತಮ್ಮ ಜವಾಬ್ದಾರಿ ಮುಗಿಯಿತೆಂದು ಕೂರದೆ ಮಕ್ಕಳ ಬಗ್ಗೆ ಗಮನ ಹರಿಸುತ್ತಿರಬೇಕು ಎಂದರು.
ಶಿಕ್ಷಕರೊಂದಿಗೆ ಪೋಷಕರು, ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕೈ ಜೋಡಿಸಿದಾಗ ಮಾತ್ರ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಡಿ.ಬಿ. ಧರ್ಮಪ್ಪ ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿದೆ. 1ರಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ, ಸರ್ವಶಿಕ್ಷಣ ಯೋಜನೆಯಲ್ಲಿ ಹಲವಾರು ಕೆಲಸಗಳನ್ನು ಶಾಲೆಗಳಿಗೆ ನೆರವೇರಿಸಿಕೊಡುತ್ತಿದೆ. ಇಂದು ಕೆಲ ಖಾಸಗಿ ಶಾಲೆಗಳು ನಾಮಾಕಾವಸ್ಥೆಗಿದ್ದು, ಕೆಲ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗುತಿದ್ದಾರೆ. ಹಾಗೆ ಯಾವುದೇ ಸರಿಯಾದ ದಾಖಲೆಗಳು ಮಕ್ಕಳಿಗೆ ಸಿಗದೆ ವಿದ್ಯಾರ್ಥಿಗಳು ಪರಿತಪಿಸುವುದನ್ನು ಕಾಣುತಿದ್ದೇವೆ.  ಆದರೆ, ಸರ್ಕಾರಿ ಶಾಲೆಗಳಲ್ಲಿ ಸರಿಯಾದ ದಾಖಲೆಗಳನ್ನು ಸಂಗ್ರಹಿಸುವಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸುರೇಶ್ ವಹಿಸಿದ್ದರು. ಎಂ.ಡಿ. ಶಿವಪ್ಪ, ಆಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಂ.ವಿ. ಅಶೋಕ್, ಸದಸ್ಯೆ ಮುತ್ತಮ, ಜಯಪ್ಪ, ಲೀಲಾಧರ, ಮಲ್ಲೇಶ್, ಲತಾ, ಮಾಧಪ್ಪ, ಮಾಚಯ್ಯ, ಲಲಿತಾ, ವೇದಾಕುಮಾರಿ, ವಿಶ್ವನಾಥ, ರಾಜು, ಗೌರಿ ಹಾಗೂ ಎಸ್‌ಡಿಎಂಸಿ ಸದಸ್ಯರು ಮುಂತಾದವರಿದ್ದರು.
ಶಿಕ್ಷಕ ಗಿರೀಶ್ ಸ್ವಾಗತಿಸಿ, ವಂದಿಸಿದರು. ಇದೇ ಸಂದರ್ಭ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.