ದಕ್ಷಿಣ ಕನ್ನಡ

ಇಂದು ಸೇವಾದಳ ಪದಗ್ರಹಣ

Published On :

ಪುತ್ತೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಪುತ್ತೂರು ಬ್ಲಾಕ್ ಪದಾಧಿಕಾರಿಗಳ ಪದ ಸ್ವೀಕಾರ ಹಾಗೂ ಕಾರ್ಯಕರ್ತರ ಸಭೆ 28ರಂದು ಪುತ್ತೂರು ಪುರಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ಸೇವಾದಳದ ಮುಖ್ಯ ಸಂಘಟಕ ಜೋಕಿಂ ಡಿ' ಸೋಜ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ ವಹಿಸಲಿದ್ದಾರೆ. ಜಿಲ್ಲಾ ಸೇವಾದಳದ ಮುಖ್ಯ ಸಂಘಟಕ ಎಚ್.ಎಂ. ಅಶ್ರಫ್ ಧ್ವಜಾರೋಹಣ ನಡೆಸಲಿದ್ದಾರೆ. ದಕ್ಷಿಣ ಭಾರತ ಸೇವಾದಳದ ಉಸ್ತುವಾರಿ ವಿನಯ ಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಲವಾರು ಮಂದಿ ಪಕ್ಷದ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಪುತ್ತೂರು ಸೇವಾದಳದ ಮುಖ್ಯ ಸಂಘಟಕಿ ಮೋಹಿನಿ ಭಂಡಾರಿ, ಜಿಲ್ಲಾ ಸೇವಾದಳದ ಪದಾಧಿಕಾರಿಗಳಾದ ಜತ್ತಪ್ಪ ರೈ ಒಳಮೊಗರು, ಇಸಾಕ್ ಸಾಲ್ಮರ, ಇತರರು ಇದ್ದರು.
ಅಬ್ಬಕ್ಕ ಉತ್ಸವಕ್ಕೆ ವಿವಿಧ ಸ್ಪರ್ಧೆ
ಮಂಗಳೂರು: ಉಳ್ಳಾಲ ವೀರರಾಣಿ ಅಬ್ಬಕ್ಕ ದಶಮಾನೋತ್ಸವ ಫೆ.9 ಮತ್ತು 10ರಂದು ಉಳ್ಳಾಲ ಭಾರತ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ಇದರ ಅಂಗವಾಗಿ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಸಾರ್ವಜನಿಕರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆ.3ರಂದು ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 8ಕ್ಕೆ ಅಂತಾರಾಷ್ಟ್ರೀಯ ಕ್ರೀಡಾಪಟು ವಂದನಾ ಶಾನುಭಾಗ್ ಕ್ರೀಡಾಕೂಟವನ್ನು ಹಾಗೂ ಚಿತ್ರನಟ ದೇವದಾಸ್ ಕಾಪಿಕಾಡ್ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸುವರು. ಜ.28ರೊಳಗೆ ಹೆಸರು ನೋಂದಾಯಿಸಬೇಕು. ವಿವರಕ್ಕೆ 9448251523ನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.