ಹೋಮ್ ಸ್ಟೇ ದಾಳಿ ಪ್ರಕರಣ ಸೆಶನ್ಸ್ ಕೋರ್ಟ್ಗೆ ವರ್ಗ
ಮಂಗಳೂರು: ಪಡೀಲ್ ಮಾರ್ನಿಂಗ್ ಮಿಸ್ಟ್ ಹೋಮ್ ಸ್ಟೇ ದಾಳಿ ಪ್ರಕರಣ ಇನ್ನು ಮುಂದೆ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ನಡೆಯಲಿದೆ. ಎಲ್ಲ 37 ಆರೋಪಿಗಳನ್ನು ಸೋಮವಾರ ಜೆಎಂಎಫ್ ಸಿ ಕೋರ್ಟ್ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳ ವಿರುದ್ಧ ಹಲ್ಲೆ, ಕಳವು ಪ್ರಕರಣ ದಾಖಲಿಸಿರುವುದರಿಂದ ವಿಚಾರಣೆಯನ್ನು ಜಿಲ್ಲಾ ಸೆಶನ್ಸ್ ಕೋರ್ಟ್ಗೆ ವರ್ಗಾಯಿಸಿರುವುದಾಗಿ ತಿಳಿಸಿದರು.
ಪ್ರಕರಣ ಮುಂದಿನ ವಿಚಾರಣೆ ಸೆಶನ್ಸ್ ನ್ಯಾಯಾಲಯದಲ್ಲಿ ನಡೆಯಲಿದೆ.
ವ್ಯಕ್ತಿ ನಾಪತ್ತೆ: ದೂರು
ಬಂಟ್ವಾಳ: ವ್ಯಕ್ತಿ ನಾಪತ್ತೆಯಾದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮಹಮ್ಮದ್ ಶರೀಫ್(37) ನಾಪತ್ತೆಯಾದಾತ. ಕಳೆದ ಜ.12ರಂದು ಸಂಜೆ 6 ಗಂಟೆಗೆ ಮನೆಯಿಂದ ಹೊರಟ ಈತ ಬಳಿಕ ಮನೆಗೆ ವಾಪಸಾಗದೆ ಕಾಣೆಯಾಗಿರುತ್ತಾನೆ. ಸುಮಾರು 5.3 ಅಡಿ ಎತ್ತರ ಗೋಧಿ ಮೈಬಣ್ಣ ಹೊಂದಿರವ ಈತ ಉದ್ದ ಮುಖ, ಸಾಧರಣ ಮೈಕಟ್ಟು ಹೊಂದಿದ್ದಾನೆ. ಕನ್ನಡ, ತುಳು, ಉರ್ದು ಮಾತನಾಡುವ ಈತ ನಾಪತ್ತೆಯಾದ ದಿನ ಶರ್ಟ್, ಲುಂಗಿ ಧರಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದ್ದ. ಈತನ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ (08255-232111) ವೃತ್ತ ನಿರೀಕ್ಷಕರ ಕಚೇರಿ (08255-235000) ಸಂಪರ್ಕಿಸುವಂತೆ ಕೋರಲಾಗಿದೆ.
ಬಸ್ ಡಿಕ್ಕಿ: ಸಾವು
ಮಂಗಳೂರು: ಬೈಕಂಪಾಡಿ ಬಳಿ ಬಸ್ ಡಿಕ್ಕಿ ಹೊಡೆದು ಹಾವೇರಿಯ ಲಕ್ಷ್ಮಣ್ ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಲಕ್ಷ್ಮಣ್ ಬಸ್ ಕಾಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

