ದಕ್ಷಿಣ ಕನ್ನಡ

ಅತ್ಯಾಚಾರ ಯತ್ನ ಆರೋಪಿ ಸೆರೆಗೆ ಗಡು

Published On :

ಮಂಗಳೂರು: ಸುಳ್ಯ ಮಡಪ್ಪಾಡಿಯ ಗುಂಡಿಗದ್ದೆ ಎಂಬಲ್ಲಿ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆದಿದ್ದು, ಆರೋಪಿ ದಿನೇಶ ಎಂಬಾತನನ್ನು ಬಂಧಿಸುವಂತೆ ಕೊರಗರ ಜಿಲ್ಲಾ ಸಮಿತಿ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಮಿತಿ ಅಧ್ಯಕ್ಷೆ ಶಶಿಕಲಾ, ಅ.10ರಂದು ಈ ಘಟನೆ ನಡೆದಿದ್ದು, ಮರುದಿನ ಸುಳ್ಯ ಪೊಲೀಸರಿಗೆ ದೂರು ನೀಡಿದರೂ ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಜಿಲ್ಲೆಯಲ್ಲಿ ಕೊರಗ ಜನಾಂಗದ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಈ ಎಲ್ಲ ವಿಚಾರವಾಗಿ ಜಿಲ್ಲಾ ಎಸ್ಪಿಗೆ ಮಂಗಳವಾರ ಮನವಿ ಸಲ್ಲಿಸಲಾಗಿದೆ. ಆರೋಪಿ ದಿನೇಶನನ್ನು 10 ದಿನದಲ್ಲಿ ಬಂಧಿಸದಿದ್ದರೆ ಫೆ.7ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕೊರಗರ ಅಭಿವೃದ್ಧಿ ಸಂಘಗಳ ಒಕ್ಕೂಟ ಸದಸ್ಯ ಸಂಜೀವ, ಬಂಟ್ವಾಳ ಕೊರಗರ ಅಭಿವೃದ್ಧಿ ಸಂಘ ಸದಸ್ಯೆ ಬಾಗಿ, ನಗರ ವಲಯ ಸಂಘದ ಸದಸ್ಯೆ ತುಂಗಾ, ಒಕ್ಕೂಟ ಸದಸ್ಯ ಅಣ್ಣಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.