ದಕ್ಷಿಣ ಕನ್ನಡ

ಜೆಡಿಎಸ್ ಬೆಂಬಲಿಗರು ಕೆಜೆಪಿ ಸೇರ್ಪಡೆ

Published On :

ಮಂಗಳೂರು: ಜೆಡಿಎಸ್ ಪಕ್ಷದಲ್ಲಿದ್ದ ತುಳುನಾಡ ರಕ್ಷಣೆ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಜ್ಯೋತಿಕಾ ಜೈನ್ ಮತ್ತು ಬೆಂಬಲಿಗರು ಬುಧವಾರ ಕೆಜೆಪಿ ಸೇರಿಕೊಂಡರು.
ಪುರಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಕೆಜೆಪಿ ಮುಖಂಡ ರಾಮಚಂದ್ರ ಬೈಕಂಪಾಡಿ ಮಾತನಾಡಿ, ತುಳುನಾಡಿನ ಜನರನ್ನು ಬೆಂಬಲಿಸಲು ನೇತ್ರಾವತಿ ತಿರುವು ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕೆಜೆಪಿ ವಿರೋಧಿಸುತ್ತಿದೆಎಂದರು. ಮುಖ್ಯಮಂತ್ರಿಯಾದ ತಕ್ಷಣ ಡಿ.ವಿ.ಸದಾನಂದ ಗೌಡ ಇಲ್ಲಿನ ಜನರ ಜೀವನದಿಯನ್ನು ತಿರುಗಿಸುವ ಪ್ರಸ್ತಾಪಕ್ಕೆ ಸಮ್ಮತಿ ನೀಡಿದರು.ನಮಗೆ ಕುಡಿಯಲು ನೀರಿಲ್ಲ, ಇದ್ದ ನೀರನ್ನು ಒಯ್ಯುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು. ಬಿಎಸ್‌ವೈ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಅಭಿವೃದ್ಧಿಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿತ್ತು. ಇಂದು 11ನೇ ಸ್ಥಾನಕ್ಕೆ ಇಳಿದಿದೆ ಎಂದು ಆರೋಪಿಸಿದರು.
ಕೆಜೆಪಿ ರಾಜ್ಯ ಸಮಿತಿ ಸದಸ್ಯೆ ಮರಿಯಮ್ಮ ಥಾಮಸ್ ಮಾತನಾಡಿ, ಭಾಗ್ಯಲಕ್ಷ್ಮಿ ಯೋಜನೆ, ವಿದ್ಯಾರ್ಥಿನಿಯರಿಗೆ ಸೈಕಲ್, ಸಂಧ್ಯಾ ಸುರಕ್ಷಾ, 108 ತುರ್ತು ಸುರಕ್ಷಾ ಸೇವೆ ಜಾರಿಗೆ ತಂದದ್ದು ಬಿಎಸ್‌ವೈ. ಮಂಗಳೂರು ಮಹಾನಗರ ಪಾಲಿಕೆ ಬಿಎಸ್‌ವೈ ಯಿಂದಾಗಿ ರು. 300 ಕೋಟಿ ಪಡೆದಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.