ಬೈಕ್ ಅಡ್ಡಗಟ್ಟಿ ವ್ಯಕ್ತಿ ಮೇಲೆ ಹಲ್ಲೆ
ವಿಟ್ಲ: ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರನ್ನು ನೋಡಲು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಬೊಲೆರೋ ಕಾರಿನಲ್ಲಿ ಬಂದು ಅಡ್ಡಗಟ್ಟಿ ವಿನಾ ಕಾರಣ ಮಾತಿಗಿಳಿದು ವ್ಯಕ್ತಿಗೆ ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ಮಂಗಳವಾರ ರಾತ್ರೆ ನೆಟ್ಲಮೂಡ್ನೂರು ಗ್ರಾಮದ ಗಣೇಶ ನಗರ ಎಂಬಲ್ಲಿ ನಡೆದಿದೆ. ಮಾಣಿ ಜಗದೀಶ್ ಜೈನ್ ಎಂಬಾತ ಮಾಣಿ ಗ್ರಾಮದ ಶಂಭುಗ ಮಹಾಬಲ ಪೂಜಾರಿ ಎಂಬವರ ಮೇಲೆ ಹಲ್ಲೆ ನಡೆಸಿದ್ದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಆಸ್ಪತ್ರೆಯಲ್ಲಿ ಸಂಬಂಧಿಕರೊಬ್ಬರು ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರ ರಾತ್ರಿ ಅವರಿಗೆ ಬಟ್ಟೆ, ಊಟ ಕೊಂಡೊಯ್ಯುತ್ತಿದ ವೇಳೆ ಈ ಹಲ್ಲೆ ನಡೆಸಲಾಗಿದೆ. ಏಕಾಏಕಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ.
ಮಹಿಳೆಗೆ ಹಲ್ಲೆ; ತಡವಾಗಿ ಪೊಲೀಸ್ ದೂರು
ವಿಟ್ಲ: ಮಹಿಳೆಯೊಬ್ಬರಿಗೆ ಆಕೆಯ ಪತಿಯ ಸಹೋದರ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೋಳಂತೂರು ಗ್ರಾಮದ ಕಲ್ಪನೆ ಎಂಬಲ್ಲಿ ಜ.27 ರಂದು ನಡೆದಿದ್ದು, ಜೀವಕ್ಕೆ ಹೆದರಿದ ಮಹಿಳೆ ಬುಧವಾರ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ಬೋಳಂತೂರು ಗ್ರಾಮದ ಕಲ್ಪನೆ ನಿವಾಸಿ ಯೂಸುಫ್ ಪತ್ನಿ ಜಮೀಳಾ (42) ಹಲ್ಲೆಗೊಳಗಾದವರು. ಅದೇ ಮನೆಯಲ್ಲಿ ವಾಸವಿರುವ ಯೂಸುಫ್ ಸಹೋದರ ಅಬ್ದುಲ್ ಹಮೀದ್(38) ಎಂಬಾತ ಆರೋಪಿಯಾಗಿದ್ದು, ಜಾಗದ ವಿಚಾರವಾಗಿ ಜಮೀಳಾ ಮನೆಗೆ ಏಕಾಏಕಿ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಈ ಬಗ್ಗೆ ಠಾಣೆಗೆ ದೂರು ನೀಡಿದರೆ, ಕೊಂದು ಹಾಕುವುದಾಗಿ ಜೀವಬೆದರಿಕೆ ಹಾಕಿದ್ದಾನೆ ಎಂದು ಜಮೀಳಾ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಹಮೀದ್ ತನ್ನ ಮೇಲೆ ಕಳೆದ ಹಲವು ವರ್ಷಗಳಿಂದ ಈ ರೀತಿಯಾಗಿ ಚಿತ್ರಹಿಂಸೆ ನೀಡುತ್ತಿದ್ದು, ತನ್ನ ಮೇಲೆ ಇಲ್ಲಸಲ್ಲದ ಅಪಾದನೆ ಹೊರಿಸುತ್ತಿದ್ದಾನೆ ಎಂದು ಜಮೀಳಾ ಪೊಲೀಸರಿಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

