ರಾಜ್ಯಮಟ್ಟದ ಮಾಧ್ಯಮ ಉತ್ಸವ: ಆಳ್ವಾಸ್ಗೆ ರನ್ನರ್ ಅಪ್ ಪ್ರಶಸ್ತಿ
ಮೂಡುಬಿದಿರೆ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಮಾಧ್ಯಮ ಮತ್ತು ಪತ್ರಿಕೋದ್ಯಮ ವಿಭಾಗ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 'ಮಾಧ್ಯಮ ಹಬ್ಬ' ಸ್ಪರ್ಧೆಗಳಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗವು ರನ್ನರ್ ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಒಟ್ಟು ಹತ್ತು ವಿಭಾಗಗಳಲ್ಲಿ ಏಳು ವಿಭಾಗಗಳಲ್ಲಿ ಆಳ್ವಾಸ್ ಅಂತಿಮ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ದರ್ಶನ್ ಬಿ.ಎಂ ಮತ್ತು ಸರಿತಾ ಭಾಗವಹಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.
ಕತೆ, ಕವಿತೆ, ಪ್ರಬಂಧಕ್ಕೆ ಆಹ್ವಾನ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಹಳೆವಿದ್ಯಾರ್ಥಿ ಸಂಘದ ವಿವಿ ಮಟ್ಟದ ವಿದ್ಯಾರ್ಥಿ ಸಮ್ಮೇಳನ ಮಾರ್ಚ್ 2ನೇ ವಾರದಲ್ಲಿ ಆಯೋಜಿಸಲಿದೆ. ಸಮ್ಮೇಳನದಲ್ಲಿ ವಿಚಾರಗೋಷ್ಠಿ, ಕತಾಗೋಷ್ಠಿ, ಕವಿಗೋಷ್ಠಿ ನಡೆಯಲಿದೆ. ಮಂಡನೆಯಾಗಬೇಕಾದ ಪ್ರಬಂಧ, ಕತೆ, ಕವಿತೆಗಳನ್ನು ಸ್ಪರ್ಧೆ ಮೂಲಕ ಆಯ್ಕೆ ಮಾಡಲಿದೆ.
ಕತೆ ಹಾಗೂ ಕವನಗಳ ವಿಷಯ ಆಯ್ಕೆಗೆ ಬಿಟ್ಟದ್ದು, ಮೂರು ಉತ್ತಮ ಕಥೆಗಳನ್ನು ಹಾಗೂ ಮೊದಲ ಹತ್ತು ಸ್ಥಾನ ಪಡೆದ ಕವಿತೆಗಳನ್ನು ಸಮ್ಮೇಳನ ಗೋಷ್ಠಿಗಳಿಗೆ ಆಯ್ಕೆ ಮಾಡಲಾಗುತ್ತದೆ. ಕತೆ ನಾಲ್ಕು ಪುಟ ಮಿತಿಯಲ್ಲಿರಲಿ. ಕಾಸರಗೋಡು ವಿದ್ಯಾರ್ಥಿಗಳೂ ಈ ಸ್ಪರ್ಧೆ ಯಲ್ಲಿ ಭಾಗವಹಿಸಬಹುದು. ನಗದು ಪುರಸ್ಕಾರ ಇದೆ. ವಿಳಾಸ, ದೂರವಾಣಿ ಸಂಖ್ಯೆ ಕಡ್ಡಾಯ ನಮೂದಿಸಬೇಕು. ಫೆ.20ರೊಳಗೆ 'ಕಾರ್ಯದರ್ಶಿ, ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಸಮಿತಿ, ಅಕ್ಷರೋದ್ಯಮ, 4ನೇ ಮಹಡಿ, ಸಿಟಿ ಪಾಯಿಂಟ್, ಕೊಡಿಯಾಲಬೈಲ್, ಮಂಗಳೂರು-575003. ಹೆಚ್ಚಿನ ಮಾಹಿತಿಗೆ 9880621824.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

