ದಕ್ಷಿಣ ಕನ್ನಡ

ಉಜಿರೆ: ನಾಳೆ ರಾಷ್ಟ್ರಮಟ್ಟದ ಆಹ್ವಾನಿತ ವಾಲಿಬಾಲ್ ಪಂದ್ಯಾಟ

Published On :






ಬೆಳ್ತಂಗಡಿ: ಅಂತಾರಾಷ್ಟ್ರೀಯ ಮತ್ತು ರಾಷ್ಟ್ರಮಟ್ಟದ ಪುರುಷ ಕ್ರೀಡಾಪಟುಗಳ ಒಗ್ಗೂಡುವಿಕೆಯಿಂದ ರಾಷ್ಟ್ರಮಟ್ಟದ ಆಹ್ವಾನಿತ ವಾಲಿಬಾಲ್ ಪಂದ್ಯಾಟ ಫೆ.2 ರಂದು ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜಯಕರ್ನಾಟಕ ಸಂಘಟನೆ ವತಿಯಿಂದ ನಡೆಯಲಿದೆ ಎಂದು ಸಂಘಟನೆಯ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಪುಷ್ಪರಾಜ ಶೆಟ್ಟಿ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊನಲು ಬೆಳಕಿನ ಪಂದ್ಯಾಟದಲ್ಲಿ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ ಮಟ್ಟದಲ್ಲಿ ವಾಲಿಬಾಲ್ ತಂಡದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರೋಮ್ ಜೋಸೆಫ್, ಅರ್ಜುನ ಪ್ರಶಸ್ತಿ ಪುರಸ್ಕೃತ ಕಪಿಲ್ ದೇವ್, ಸುನಿಲ್, ಪ್ರಭಾಕರನ್, ರವಿಕುಮಾರ್, ಅನೂಪ್,ಅಝೀಝ್, ವೈಷ್ಣವ, ಕ್ರಿಸ್ಟೋಫರ್, ಕಾರ್ತಿಕ್, ತೆನ್ನರಸನ್, ಸೌಂದರ್ ರಾಜ್, ಮನುಜೋಸೆಫ್, ಗಣೇಶ್ ರೈ ಮತ್ತಿತರರು ಭಾಗವಹಿಸಲಿದ್ದಾರೆ. ಪಂದ್ಯಾಟಕ್ಕೆ ಸಂಜೆ 6.30ಕ್ಕೆ ಅಂತಾರಾಷ್ಟ್ರೀಯ ವಾಲಿಬಾಲ್ ಆಟಗಾ ಟೋಮ್ ಜೋಸೆಫ್ ಮತ್ತು ಕಪಿಲ್‌ದೇವ್ ಚಾಲನೆ ನೀಡಲಿದ್ದಾರೆ. ಜಯಕರ್ನಾಟಕ ರಾಜ್ಯಾಧ್ಯಕ್ಷ ಬಿ.ಎನ್.ಜಗದೀಶ್ ಕ್ರೀಡಾಂಗಣ ಉದ್ಘಾಟಿಸಲಿದ್ದಾರೆ. ಶಾಸಕ ವಸಂತ ಬಂಗೇರ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ, ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯನಾಥ ವಿಠಲ ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.  ಸ್ವಾಗತ ಸಮಿತಿ ಸಂಚಾಲಕ ಸುಭಾಶ್ಚಂದ್ರ ರೈ, ಆರ್ಥಿಕ ಸಮಿತಿ ಸಂಚಾಲಕ ವಿಜಯಾ ಫೆರ್ನಾಂಡಿಸ್, ಪ್ರಚಾರ ಸಮಿತಿ ಸಂಚಾಲಕ ಮಂಜುನಾಥ ರೈ, ಗಣೇಶ್ ಬೋಳಿಯಂಜಿ, ಪತ್ರಕರ್ತ ಶಿಬಿ ಧರ್ಮಸ್ಥಳ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.