ಸುಳ್ಯದಲ್ಲಿ ಭಾರಿ ಮಳೆ: ಕೊಚ್ಚಿ ಹೋದ ಯುವಕ
ಸುಳ್ಯ: ಸುಳ್ಯದಲ್ಲಿ ಮತ್ತೆ ಭಾರಿ ಮಳೆ ಸುರಿಯಲಾರಂಬಿಸಿದೆ. ತೋಡಿನಲ್ಲಿ ಕೊಚ್ಚಿ ಹೋಗಿ ಯುವಕನೊಬ್ಬ ಮೃತಪಟ್ಟ ಘಟನೆ ಅಜ್ಜಾವರದಲ್ಲಿ ನಡೆದಿದ್ದು, ಮಂಗಳವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಅಜ್ಜಾವರ ಗ್ರಾಮದ ಮುಳ್ಯ ನಿವಾಸಿ ಸದಾಶಿವ ರಾವ್ ಎಂಬವರ ಪುತ್ರ ದಯಾನಂದ (29) ಮೃತ ಯುವಕ. ಸೋಮವಾರ ಸುಳ್ಯಕ್ಕೆ ಬಂದಿದ್ದ ದಯಾನಂದ ರಾತ್ರಿ ಮುಳ್ಯದಲ್ಲಿರುವ ತನ್ನ ನಿವಾಸಕ್ಕೆ ವಾಪಸಾಗುವಾಗ ಈ ಘಟನೆ ನಡೆದಿದೆ. ತೋಡಿನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿಹೋದ ದಯಾನಂದನ ಮೃತದೇಹ ಬೆಳಗ್ಗೆ ತೋಡಿನಲ್ಲಿ ಪತ್ತೆಯಾಗಿದ್ದು, ಸುಳ್ಯ ಸಮುದಾಯ ಆರೋಗ್ಯ ಕೆಂದ್ರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಕೊಡಗಲ್ಲಿ ಆರ್ಭಟ: ಕೊಡಗು ಜಿಲ್ಲೆಯಲ್ಲಿ ಮೂರು ದಿನಗಳಿಂದ ಬಿಡುವು ನೀಡಿದ್ದ ವರುಣ ಮಂಗಳವಾರ ಮತ್ತೆ ಅಬ್ಬರಿಸಿದ್ದಾನೆ. ಮಂಗಳವಾರ ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗಿದೆ. ಕಾವೇರಿ ನದಿಯಲ್ಲಿ ನೀರಿನ ಹರಿವು ಮತ್ತೆ ಹೆಚ್ಚಿದ್ದು, ಹಾರಂಗಿ ಜಲಾಶಯಕ್ಕೂ ನೀರಿನ ಒಳಹರಿವಿನಲ್ಲಿ ಗಣನೀಯ ಹೆಚ್ಚಳವಾಗಿದೆ.
ಉಡುಪಿಯಲ್ಲೂ ಮಳೆ: 2 ದಿನಗಳಿಂದ ಕರಾವಳಿಯಾದ್ಯಂತ ಗಾಳಿಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಭಾನುವಾರ ರಾತ್ರಿ ಪ್ರಾರಂಭಗೊಂಡ ಮಳೆ ಮಂಗಳವಾರದವರೆಗೂ ಮುಂದುವರಿದಿದೆ. 2 ದಿನಗಳಿಂದ ಎಡೆಬಿಡದೆ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಸ್ವಲ್ಪ ಮಟ್ಟಿಗೆ ಜನಜೀವನ ಅಸ್ತವ್ಯಸ್ತಗೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

