ಸಾಹಿತಿ ದೊಡ್ಡರಂಗೇಗೌಡರಿಗೆ ಕೊ.ಅ. ಉಡುಪ ಸಂಸ್ಮರಣಾ ಪ್ರಶಸ್ತಿ
ಕನ್ನಡಪ್ರಭ ವಾರ್ತೆ, ಮೂಲ್ಕಿ, ಜು.9
ಕಿನ್ನಿಗೋಳಿಯ “¾ÚßßVÚ®ÚâÁÚßÎÚ’ ಸಂಸ್ಥಾಪಕ ದಿ.ಕೊ.ಅ. ಉಡುಪ ಸಂಸ್ಮರಣಾ ಪ್ರಶಸ್ತಿಗೆ ಸಾಹಿತ್ಯ ಹಾಗೂ ಹತ್ತು ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಕನ್ನಡ ಪ್ರಾಧ್ಯಾಪಕ ಡಾ. ದೊಡ್ಡರಂಗೇಗೌಡ ಅವರು ಭಾಜನರಾಗಿದ್ದಾರೆ.
ಜು.24ರಂದು ಕಿನ್ನಿಗೋಳಿಯ “¾ÚßßVÚ®ÚâÁÚßÎÚ’ ಸಭಾಭವನದಲ್ಲಿ ಜರುಗಲಿರುವ ಸಮಾರಂಭದಲ್ಲಿ 10,000 ನಗದು, ಗೌರವ ಫಲಕ, ಪ್ರಶಸ್ತಿ ನೀಡಿ ದೊಡ್ಡರಂಗೇಗೌಡ ಅವರನ್ನು ಗೌರವಿಸಲಾಗುವುದು ಎಂದು “¾ÚßßVÚ®ÚâÁÚßÎÚ’¥Ú ಕೊಡೆತ್ತೂರು ಭುವನಾಭಿರಾಮ ಉಡುಪ ತಿಳಿಸಿದ್ದಾರೆ.
ಚಲನಚಿತ್ರ, ಸುಗಮ ಸಂಗೀತ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಡಾ. ದೊಡ್ಡರಂಗೇಗೌಡರ ಬರಹಗಳು ಕಿನ್ನಿಗೋಳಿಯ “¾ÚßßVÚ®ÚâÁÚßÎÚ’ ಸೇರಿದಂತೆ ರಾಜ್ಯದ ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
ಈವರೆಗೆ ಸುಮಾರು 80 ಕೃತಿಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ಚಿರಸ್ಥಾಯಿಯಾಗಿದ್ದಾರೆ. 500ಕ್ಕೂ ಹೆಚ್ಚು ಕನ್ನಡ ಚಿತ್ರಗೀತೆಗಳನ್ನು, 80ಕ್ಕೂ ಮಿಕ್ಕಿ ಧ್ವನಿ ಸುರುಳಿಗಳನ್ನು 100ಕ್ಕೂ ಹೆಚ್ಚು ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆಗಳನ್ನು ರಚಿಸಿದ್ದಾರೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

