ಶಾಂತಿಪ್ರಸಾದ್ ಬಿಜೆಪಿ ಸೇರ್ಪಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ, ಮೂಡುಬಿದಿರೆ ವಕೀಲ ಶಾಂತಿ ಪ್ರಸಾದ್ ಹೆಗ್ಡೆ ಬಿಜೆಪಿ ಸೇರಿದ್ದಾರೆ. ಗುರುವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ ಅಧ್ಯಕ್ಷತೆಯಲ್ಲಿ ಬಿಜೆಪಿ ಸೇರ್ಪಡೆಯಾದರು. ಮೂಡುಬಿದಿರೆಯಲ್ಲಿ ಅಭಯಚಂದ್ರ ಜೈನ್ ಗೆಲುವಿಗೆ 3 ಅವಧಿಯಲ್ಲಿ ದುಡಿದಿದ್ದು, ಅವರು ಕಾರ್ಯಕರ್ತರನ್ನು ತುಳಿಯುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಹಿಂದುಗಳು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹೋದರೆ ಅವರನ್ನು ಅಸ್ಪೃಶ್ಯರಂತೆ ಕಾಣಲಾಗುತ್ತಿದೆ. ಅವಮಾನ ಮಾಡುತ್ತಾರೆ. ಇದನ್ನು ಸಹಿಸದೆ ಕಾಂಗ್ರೆಸ್ ತ್ಯಜಿಸಿದ್ದಾಗಿ ಶಾಂತಿ ಪ್ರಸಾದ್ ಹೆಗ್ಡೆ ಹೇಳಿದರು. ಮುಂದೆ ಮೂಡುಬಿದಿರೆಯಲ್ಲಿ ಅನೇಕ ಕಾರ್ಯಕರ್ತರು ಕಾಂಗ್ರೆಸ್ ಹಾಗೂ ಜೆಡ್‌ಎಸ್‌ನಿಂದ ಬಿಜೆಪಿ ಸೇರಲಿದ್ದು, ಇನ್ನೆರಡು ತಿಂಗಳಲ್ಲಿ ಬಿಜೆಪಿ ಸಮಾವೇಶ ಹಮ್ಮಿಕೊಳ್ಳುವುದಾಗಿ ಹೇಳಿದರು.
ಗ್ರಾಮಲೆಕ್ಕಾಧಿಕಾರಿವಜಾ: ಅಭಿನಂದನೆ
ಉಡುಪಿ: ನೇರ ನೇಮಕಾತಿಯಲ್ಲಿ ನಕಲಿ ದಾಖಲೆ ಕೊಟ್ಟು ಆಯ್ಕೆಗೊಂಡ 8 ಗ್ರಾಮ ಲೆಕ್ಕಾಧಿಕಾರಿಗಳನ್ನು ಜಿಲ್ಲಾಧಿಕಾರಿ ನೌಕರಿಯಿಂದ ವಜಾಗೊಳಿಸಿ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ನಾಗರಿಕ ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.
ತಡೆಯಾಜ್ಞೆ
ಧಾರವಾಡ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕೆಲವು ಸಿಂಡಿಕೇಟ್ ಸದಸ್ಯರ ನೇಮಕಾತಿಯನ್ನು ಅವಧಿಗೆ ಮುನ್ನವೇ ರದ್ದು ಮಾಡಿದ ಸರ್ಕಾರದ ಆದೇಶಕ್ಕೆ ಇಲ್ಲಿನ ಹೈಕೋರ್ಟ್ ಸಂಚಾರಿ ಪೀಠ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಸಿಂಡಿಕೇಟ್ ಸದಸ್ಯರನ್ನಾಗಿ 3 ವರ್ಷಗಳವರೆಗೆ ನಾಮನಿರ್ದೇಶನ ಮಾಡಿದ್ದು ತಮ್ಮ ನೇಮಕಾತಿಯನ್ನು ಅವಧಿಗೆ ಮುನ್ನವೇ ರಾಜ್ಯ ಸರ್ಕಾರ ಏಕಾಏಕಿ ರದ್ದುಗೊಳಿಸಿದೆ ಎಂದು ಸಿಂಡಿಕೇಟ್ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ನ್ಯಾ. ಎಚ್.ಜಿ. ದೇಸಾಯಿ ಅವರಿದ್ದ ಏಕಸದಸ್ಯ ಪೀಠ ಜು.18ರವರೆಗೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ಸರ್ಕಾರ ಏತಕ್ಕಾಗಿ ನೇಮಕಾತಿ ರದ್ದು ಮಾಡಿದೆ ಎಂದು ಕಾರಣ ಕೊಡಬೇಕೆಂದು ಆದೇಶಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

