ಕಾಳಹಸ್ತೇಂದ್ರಶ್ರೀ ಚಾತುರ್ಮಾಸ್ಯ
ಮಂಗಳೂರು: ಶ್ರೀ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರ ಶ್ರೀಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರ ವಿಜಯನಾಮ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆ ಜು.22ರಿಂದ ಸೆ.22ರವರೆಗೆ ಉಡುಪಿಯ ಕಟಪಾಡಿ ವೇಣುಗಿರಿ ಶ್ರೀಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಾಲಯದಲ್ಲಿ ಜರುಗಲಿದೆ.
22ರಂದು ಬೆಳಗ್ಗೆ ಸ್ವಾಮೀಜಿಯಿಂದ ಚಾತುರ್ಮಾಸ್ಯ ವ್ರತ ಸಂಕಲ್ಪ ಹಾಗೂ 11 ಗಂಟೆಗೆ ಶ್ರೀಗುರುಪಾದ ಪೂಜೆ ನಡೆಯಲಿರುವುದು. ಮಧ್ಯಾಹ್ನ 3ಕ್ಕೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿರುವುದು. ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಾಲಯದ ಆಡಳಿತ ಮೊಕ್ತೇಸರ ಪಡುಕುತ್ಯಾರು ಸದಾಶಿವ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.ಪ್ರತಿದಿನ ಸಂಜೆ 5ಕ್ಕೆ ಸಾಂಸ್ಕೃ ತಿಕ ಕಾರ್ಯಕ್ರಮ ಜರುಗಲಿದೆ. ಚಾತುರ್ಮಾಸ್ಯ ವ್ರತ ಸಂದರ್ಭ ಪ್ರತಿ ಭಾನುವಾರ ಸಂಜೆ 4ರಿಂದ 4.30ರವರೆಗೆ ಗುರುಗಳ ವಿಶೇಷ ಧಾರ್ಮಿಕ ಪ್ರವಚನ, 4.30ರಿಂದ 5.15ರವರೆಗೆ ಮಂತ್ರಾಕ್ಷತೆ, 5.30ರಿಂದ 7 ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ 8 ಗಂಟೆಗೆ ಮಹಾಪೂಜೆ ನಡೆಯಲಿರುವುದು ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

