ದಕ್ಷಿಣ ಕನ್ನಡ

ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತ್ರಕರ್ತ

Published On :

ಕ.ಪ್ರ. ವಾರ್ತೆ, ಮಂಗಳೂರು, ಜು.15
ಅನೈತಿಕ ಸಂಪರ್ಕ ವಿಚಾರದಲ್ಲಿ ಗಲಾಟೆ ನಡೆದು ಪತ್ರಕರ್ತ ಗಂಗಾಧರ ಪಡುಬಿದ್ರಿ ತನ್ನ ಪತ್ನಿ ಮಮತಾ ಶೆಟ್ಟಿ (32)ಯನ್ನು ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಇಲ್ಲಿಯ ಕೊಟ್ಟಾರ-ಕೋಡಿಕಲ್ ಬಳಿಯ ಪ್ರಶಾಂತ ನಿಲಯದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
 ಆರೋಪಿ ಗಂಗಾಧರ ಪಡುಬಿದ್ರಿ (40) ದೂರದರ್ಶನ ವಾಹಿನಿಗೆ ಸುದ್ದಿಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದ. ಕೊಲೆಯಾದ ಮಮತಾ ಶೆಟ್ಟಿ ಪ್ರತಿಷ್ಠಿತ ಎಸ್‌ಡಿಎಂ ಕಾನೂನು ವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕಿಯಾಗಿದ್ದರು.
ಎಂದಿನಂತೆ ದಂಪತಿ ನಡುವೆ ಸೋಮವಾರವೂ ಗಲಾಟೆ ನಡೆದಿದೆ. ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದು, ಆಕ್ರೋಶಗೊಂಡ ಪತಿ ಪತ್ನಿಯ ಕತ್ತು ಹಿಸುಕಿದ್ದಾನೆ. ಬಳಿಕ ತನ್ನ ಅಣ್ಣನಿಗೆ ಕರೆ ಮಾಡಿದ, ಗಂಗಾಧರ್ ಗಲಾಟೆ ನಡೆದ ವಿಷಯ ತಿಳಿಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ಅಣ್ಣ ರೋಹಿಣಾನಂತ ಸ್ವಾಮಿ ಮಮತಾ ನಿರ್ಜೀವವಾಗಿ ಬಿದ್ದಿರುವುದನ್ನು ಗಮನಿಸಿ, ಉರ್ವ ಪೊಲೀಸರಿಗೆ ಕರೆ ಮಾಡಿ ತಿಳಿಸಿದರು.
 ಸ್ಥಳಕ್ಕೆ ಡಿಸಿಪಿ ಧರ್ಮಯ್ಯ, ಉರ್ವ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್, ಸಬ್‌ಇನ್ಸ್‌ಪೆಕ್ಟರ್ ಆಗಮಿಸಿ ತನಿಖೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.