ದಕ್ಷಿಣ ಕನ್ನಡ

ಕಬ್ಬಿಣಾಂಶ ಮಾತ್ರೆ ಉತ್ತಮ ಯೋಜನೆ: ಡಿಸಿ

Published On :

ಮಂಗಳೂರು: ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾದ ಕಬ್ಬಿಣಾಂಶವಿರುವ ಮಾತ್ರೆಯನ್ನು ಸರ್ಕಾರದ ವತಿಯಿಂದ ಮಕ್ಕಳಿಗೆ ವಿತರಿಸಲಾಗುತ್ತಿದ್ದು, ಉತ್ತಮ ಯೋಜನೆಯಾಗಿದೆ ಎಂದು ಜಿಲ್ಲಾಧಿಕಾರಿ ಎನ್. ಪ್ರಕಾಶ್ ಹೇಳಿದ್ದಾರೆ.
ರಾಜ್ಯ ಸರ್ಕಾರದ 'ವಾರಕ್ಕೊಂದು ಕಬ್ಬಿಣಾಂಶ ಮತ್ತು ಪೋಲಿಕ್ ಆ್ಯಸಿಡ್ ವಿತರಣೆ ಯೋಜನೆ'ಯಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾಡಳಿತ,ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾಡಳಿತ ಆಶ್ರಯದಲ್ಲಿ ಬುಧವಾರ ಅತ್ತಾವರ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಕಬ್ಬಿಣಾಂಶದ ಮಾತ್ರೆ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.
6ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಮಾತ್ರೆಗಳನ್ನು ನೀಡಲಾಯಿತು. ಊಟ ಮಾಡಿದ ಅರ್ಧ ಗಂಟೆಯಲ್ಲಿ ವಾರಕ್ಕೊಂದು ಬಾರಿ ಮಾತ್ರೆಯನ್ನು ಶಿಕ್ಷಕರು ನೀಡುವಂತೆ ತಿಳಿಸಲಾಯಿತು.
ಆರ್‌ಸಿಎಚ್ ಅಧಿಕಾರಿ ಡಾ. ರುಕ್ಮಿಣಿ ಮಾತನಾಡಿ, ಹದಿಹರೆಯ ಮಾನಸಿಕ, ದೈಹಿಕ ಬದಲಾವಣೆಗಳನ್ನು ಹೊಂದುವ ಘಟ್ಟವಾಗಿದ್ದು, ದೇಹ ಬೆಳವಣಿಗೆಗೆ ಸಾಕಷ್ಟು ಆಹಾರಗಳನ್ನು ಬೇಡಿಕೆಯಿಡುತ್ತದೆ. ಈ ಸಂದರ್ಭ ಮಕ್ಕಳಲ್ಲಿ ಉಂಟಾಗುವ ರಕ್ತ ಹೀನತೆ ಹಾಗೂ ಎನಿಮಿಯಾವನ್ನು ತಡೆಗಟ್ಟಲು ಈ ಮಾತ್ರೆಗಳನ್ನು ನೀಡಲಾಗುತ್ತದೆ ಎಂದರು.
ಸಕಾಲದಲ್ಲಿ 10 ರಿಂದ 19 ವರ್ಷದೊಳಗೆ ಮಕ್ಕಳಿಗೆ ಈ ಮಾತ್ರೆಗಳನ್ನು ನೀಡಿದ್ದಲ್ಲಿ ಮಕ್ಕಳ ಏಕಾಗ್ರತೆಯನ್ನು ಕಾಪಾಡಿಕೊಳ್ಳಬಹುದು. ಈ ಕುರಿತು ಹೆತ್ತವರರೊಂದಿಗೆ ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು. ಇದು ಹೆಣ್ಣು ಮತ್ತು ಗಂಡು ಮಕ್ಕಳ ಮುಂದಿನ ಬದುಕಿನಲ್ಲಿ ಉಂಟಾಗುವ ತೊಂದರೆಗಳಿಗೆ ಪರಿಹಾರ ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಸ್ಥಾಯಿ ಸಂಸ್ಥೆಗಳ ಅಧ್ಯಕ್ಷೆ ಆಶಾ ತಿಮ್ಮಪ್ಪ, ಸರ್ವ ಶಿಕ್ಷಣ ಅಭಿಯಾನದ ಸಮನ್ವಯ ಯೋಜನಾಧಿಕಾರಿ ಗೀತಾ, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಮೋಸೆಸ್ ಜಯಶೇಖರ್, ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ ರವೂಫ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.