ದಕ್ಷಿಣ ಕನ್ನಡ

ಪಾಲಿಕೆ ವಾಹನ ಚಾಲಕನ ಕೊಲೆ ಯತ್ನ

Published On :

ಮಂಗಳೂರು: ಮಹಾನಗರ ಪಾಲಿಕೆ ವಾಹನದ ಚಾಲಕನ ಮೇಲೆ ಲೇಡಿಹಿಲ್ ಬಳಿ ನಾಲ್ವರು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಕೊಲೆಗೆ ಯತ್ನಿಸಿದ್ದಾರೆ.
 ಶನಿವಾರ ರೋಹಿತ್ ಹೊಯ್ಗೆಬೈಲ್ (30)ಎಂದಿನಂತೆ ವಾಹನದಲ್ಲಿ ಮಹಾನಗರ ಪಾಲಿಕೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಲೇಡಿಹಿಲ್ ಬಳಿ ಬೈಕ್‌ನಲ್ಲಿ ಬಂದ ನಾಲ್ವರು ವಾಹನ ತಡೆದು ತಲವಾರ್‌ಗಳಿಂದ ಹಲ್ಲೆ ಮಾಡಿದ್ದಾರೆ. ಗಲಾಟೆ ನೋಡಿ ಜನ ಜಮಾಯಿಸಿದ್ದು, ಅಷ್ಟರಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ವಾಹನ ಸಂಪೂರ್ಣ ಜಖಂ ಆಗಿದೆ. ರೋಹಿತ್ ಕುತ್ತಿಗೆ, ಕೈಗೆ ಗಾಯವಾಗಿದ್ದು, ಮಣ್ಣಗುಡ್ಡ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
 ಕುಟುಂಬದೊಳಗಿನ ಆಸ್ತಿ ವಿವಾದವೇ ಕೊಲೆ ಯತ್ನಕ್ಕೆ ಕಾರಣ ಎನ್ನಲಾಗಿದೆ. ಕಳೆದ 4 ದಿನಗಳಿಂದ ನಾಲ್ವರು ಹಿಂಬಾಲಿಸುತ್ತಿರುವುದು ಗಮನಕ್ಕೆ ಬಂದಿತ್ತು. ಕೊಲೆ ಆರೋಪಿಯೊಬ್ಬ, ರೌಡಿ ಚಟುವಟಿಕೆಯಲ್ಲಿ ತೊಡಗಿದ್ದು,  ಆತನಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ, ಆದರೂ ಕೊಲೆಗೆ ಯತ್ನಿಸಿದ್ದಾನೆ ಎಂದು ರೋಹಿತ್ ಪೊಲೀಸರಿಗೆ ದೂರು ನೀಡಿದ್ದಾರೆ.
ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.