ಬಡರೋಗಿಗಳಿಂದ ಹಣ ವಸೂಲಿ: ಒಕ್ಕೂಟ ಪ್ರತಿಭಟನೆ
ಮಂಗಳೂರು: ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಮತ್ತು ಉಚಿತ ಚಿಕಿತ್ಸೆಗೂ ಹಣ ವಸೂಲಿ ಮಾಡುತ್ತಿರುವ ವಿರುದ್ಧ ಕೊರಗ ಸಮುದಾಯದವರು ಕರ್ನಾಟಕ- ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜಿಲ್ಲೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದೆ, ತುರ್ತು ಸಂದರ್ಭ ವೈದ್ಯರ ಸೇವೆ ದೊರೆಯುವುದಿಲ್ಲ. ಆದಷ್ಟು ಶೀಘ್ರದಲ್ಲಿ ವೈದ್ಯ, ಸಿಬ್ಬಂದಿ ನೇಮಕ ಮಾಡಬೇಕು. ಬಡವರಿಗೆ ಚಿಕಿತ್ಸೆ ಉಚಿತವಾಗಿದ್ದರೂ ರೋಗಿಗಳಿಂದ ಹಣ ಪಡೆಯಲಾಗುತ್ತಿದೆ ಎಂದು ಆರೋಪಿಸಿದರು. ಉಪ್ಪಿನಂಗಡಿ, ಪುತ್ತೂರು, ವಿಟ್ಲದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗೆ ಹೋದರೆ ಕೆಟ್ಟದಾಗಿ ನಡೆಸಿಕೊಳ್ಳುತ್ತಾರೆ ಎಂದು ಪ್ರತಿಭಟನೆಕಾರರು ಆರೋಪಿಸಿದರು
'ಆಸ್ಪತ್ರೆಗೆ ದಾಖಲಾಗದೆ 500 ಕೇಳುತ್ತಾರೆ, ನಮ್ಮಂಥ ಬಡವರಿಗೆ ಅಷ್ಟು ದೊಡ್ಡ ಮೊತ್ತ ನೀಡಲು ಸಾಧ್ಯವಿಲ್ಲ. ನಮ್ಮ ಸಮುದಾಯದವರಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು' ಎಂದು ಒಕ್ಕೂಟ ಸಂಚಾಲಕ ಕೆ.ಬಿ.ಹೋಬಳೇಶ್ ಒತ್ತಾಯಿಸಿದರು.
ಜಿಲ್ಲಾ ಸಂಚಾಲಕಿ ಸುಶೀಲಾ, ಅಶೋಕ್ ಕುಮಾರ್, ಸಮಗ್ರ ಗ್ರಾಮೀಣ ಆಶ್ರಮ ಸ್ವಯಂಸೇವಾ ಸಂಸ್ಥೆಯ ಶಶಿಕಲಾ ಪ್ರತಿಭಟನೆಯಲ್ಲಿ ಭಾಗವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

