ಎಬಿವಿಪಿ ಬೈಠಕ್ಗೆ ದಾಳಿ: ವಿದ್ಯಾರ್ಥಿಗಳ ತಂಡ ವಿರುದ್ಧ ದೂರು
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ನೆಲ್ಯಾಡಿ ಪಾಂಡಿಬೆಟ್ಟು ಶ್ರೀ ನಾರಾಯಣ ಗುರು ಮಂದಿರದಲ್ಲಿ ಎಬಿವಿಪಿ ವಿದ್ಯಾರ್ಥಿಗಳು ಬೈಠಕ್ ನಡೆಸುತ್ತಿದ್ದಾಗ ಭಿನ್ನ ಕೋಮಿನ ವಿದ್ಯಾರ್ಥಿಗಳು ದಾಳಿ ನಡೆಸಿ, ಬೈಠಕನ್ನು ಆಕ್ಷೇಪಿಸಿದ ಘಟನೆ ಸೋಮವಾರ ನಡೆದಿದೆ.
ಕೋಣಾಲು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರು ತರಗತಿ ತೆಗೆದುಕೊಂಡ ಸಂದರ್ಭ ಸ್ವಯಂಸೇವಾ ಸಂಘಟನೆಗಳ ಉದಾಹರಣೆ ಬಯಸಿದಾಗ ಓರ್ವ ವಿದ್ಯಾರ್ಥಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಸರು ಹೇಳಿ ಉದಾಹರಣೆ ನೀಡಿದ್ದನು.
ಈ ಬಗ್ಗೆ ತರಗತಿ ಮುಗಿದ ಬಳಿಕ ಕಾಲೇಜಿನ ಕೆಲ ವಿದ್ಯಾರ್ಥಿಗಳು ಆ ವಿದ್ಯಾರ್ಥಿಯನ್ನು ಆಕ್ಷೇಪಿಸಿ ಆತನ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪ್ರಾಂಶುಪಾಲರಿಗೆ ದೂರು ಸಲ್ಲಿಸಲಾಗಿದ್ದು, ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಿದ್ದರು.
ಇತ್ತ ಎಬಿವಿಪಿ ಸಂಘಟನೆಯ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು, ಎಬಿವಿಪಿಯ ಪರಿಸರದ ಕೆಲ ಕಾಲೇಜಿಗೆ ಸೇರಿದ ವಿದ್ಯಾರ್ಥಿ ಪ್ರಮುಖರು ನೆಲ್ಯಾಡಿ ಪಾಂಡಿಬೆಟ್ಟು ಶ್ರೀ ನಾರಾಯಣ ಗುರು ಮಂದಿರದಲ್ಲಿ ಬೈಠಕ್ ನಡೆಸುತ್ತಿದ್ದಾಗ, ಮಂದಿರದ ಆವರಣಕ್ಕೆ ಪ್ರವೇಶಿಸಿದ ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಬೈಠಕ್ ನಡೆಸುವ ಬಗ್ಗೆ ಅವಾಚ್ಯ ಪದಗಳ ಶಬ್ದಗಳ ಬಳಕೆಯೊಂದಿಗೆ ಆಕ್ಷೇಪಿಸಿದರೆನ್ನಲಾಗಿದೆ.
ಪರಿಸ್ಥಿತಿ ಉದ್ವಿಗ್ನ: ಈ ಕೃತ್ಯದಿಂದ ಉಭಯ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಉದ್ವಿಗ್ನ ವಾತಾವರಣ ಉಂಟಾಗಿತ್ತು. ವಿಷಯ ತಿಳಿದ ಪೊಲಿಸರು ಸ್ಥಳಕ್ಕೆ ಧಾವಿಸಿ ಮಂದಿರದ ಹೊರಗೆ ಜಮಾಯಿಸಿದ್ದ ಗುಂಪನ್ನು ಚದುರಿಸಿದರು.
ದಾಳಿ ಕೃತ್ಯವೆಸಗಿದ ವಿದ್ಯಾರ್ಥಿಗಳ ವಿರುದ್ಧ ಎಬಿವಿಪಿ ವಿದ್ಯಾರ್ಥಿಗಳು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

