ವಿದ್ಯಾರ್ಥಿನಿಗೆ ಚುಡಾಯಿಸಿದ ವಿದ್ಯಾರ್ಥಿಗೆ ಹಲ್ಲೆ: ಪ್ರತಿಭಟನೆ
ವಿಟ್ಲ: ವಿದ್ಯಾರ್ಥಿನಿಯನ್ನು ಚುಡಾಯಿಸಿದ ವಿಚಾರವಾಗಿ ವಿದ್ಯಾರ್ಥಿಗಳ ಗುಂಪೊಂದು ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಘಟನೆ ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ.
ಭಿನ್ನ ಧರ್ಮಕ್ಕೆ ಸೇರಿದ ವಿದ್ಯಾರ್ಥಿನಿಯೊಬ್ಬಳ ಜತೆ ಅದೇ ಕಾಲೇಜಿನ ವಿದ್ಯಾರ್ಥಿ ದೂರವಾಣಿ ಸಂಖ್ಯೆ ಕೇಳಿ, ಮೊಬೈಲ್‌ನಲ್ಲಿ ಫೋಟೋ ತೆಗೆಯಲು ಮುಂದಾದ ಘಟನೆ ಬಗ್ಗೆ ವಿದ್ಯಾರ್ಥಿನಿ ಪ್ರಾಂಶುಪಾಲರಿಗೆ ದೂರು ನೀಡಿದ್ದಳು. ಇದೇ ವಿಚಾರವಾಗಿ ವಿದ್ಯಾರ್ಥಿಗಳ ತಂಡ ಕಾಲೇಜಿನ ಆವರಣದಲ್ಲಿ, ಚುಡಾಯಿಸಿದ್ದ ಎನ್ನಲಾದ ವಿದ್ಯಾರ್ಥಿಗೆ ಥಳಿಸಿದೆ. ಬಳಿಕ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಬಗ್ಗೆ ವಿದ್ಯಾರ್ಥಿನಿಯರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಇತ್ತಂಡದವರು ಠಾಣೆಗೆ ದೂರು ನೀಡಿದ್ದಾರೆ.
ಪ್ರತಿಭಟನೆ: ಪ್ರಕರಣದ ಮುಂದುವರಿದ ಭಾಗವಾಗಿ ಹಲ್ಲೆ ಘಟನೆ ಹಾಗೂ ಪ್ರಾಂಶುಪಾಲರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಕಾಲೇಜಿನಲ್ಲಿ ಪ್ರತಿಭಟನೆ ನಡೆಯಿತು. ಕಾಲೇಜು ಆವರಣದಿಂದ ಮೆರವಣಿಗೆ ಹೊರಟ ನೂರಾರು ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ವಿಟ್ಲ ಮುಖ್ಯಪೇಟೆ ಮೂಲಕ ಸಾಗಿ ಖಾಸಗಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಸಭೆ ನಡೆಯಿತು.
ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ರಮೇಶ್ ಕೆ. ಮಾತನಾಡಿ, ಪ್ರಾಂಶುಪಾಲರು ವರ್ಗಾವಣೆಗೊಳ್ಳುವ ತನಕ ಪ್ರತಿಭಟನೆ ಅನಿರ್ದಿಷ್ಟಾವಧಿವರೆಗೆ ಮುಂದುವರಿಯಲಿದೆ ಎಂದು ಘೋಷಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಟ್ಲ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತುಗೊಳಿಸಿ, ಅಮಾನತುಗೊಂಡಿರುವ ವಿದ್ಯಾರ್ಥಿಗಳನ್ನು ತರಗತಿಗೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿದರು. ಎಬಿವಿಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ರವಿ ಮಾಣಿಲ, ನಗರ ಕಾರ್ಯದರ್ಶಿ ನಾಗೇಶ್ ಇಡ್ಯಾಡಿ, ವಿನಯ ಆಲಂಗಾರು, ಯುವರಾಜ್ ಕಾಡುಮಠ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

