ಕಾಲೇಜು ಸೊತ್ತುಗಳಿಗೆ ಹಾನಿ: ದೂರು
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳ ಗುಂಪಿನ ನಡುವೆ ಮಾರಾಮಾರಿ ವೇಳೆ ಕಾಲೇಜಿನ ಕಿಟಕಿ ಗಾಜುಗಳನ್ನು ಹಾಗೂ ಇನ್ನಿತರ ಸೊತ್ತುಗಳನ್ನು ಹಾನಿಗೊಳಪಡಿಸಿ, ಸರ್ಕಾರಿ ಆಸ್ತಿಯನ್ನು ಹಾಳುಗೆಡವಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸುಬ್ರಹ್ಮಣ್ಯ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ.
ಇತ್ತ ಸಂಘರ್ಷದ ಸುದ್ದಿ ತಿಳಿದು ಕಾಲೇಜಿಗೆ ಪೊಲೀಸರು ಆಗಮಿಸಿದ ಬಳಿಕವೂ ಜಟಾಪಟಿಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ಕೃತ್ಯವನ್ನು ಪೊಲೀಸರು ವಿಡಿಯೋ ಚಿತ್ರೀಕರಣ ನಡೆಸಿದ್ದು, ವಿಡಿಯೋದಲ್ಲಿ ತಪ್ಪಿತಸ್ಥರೆಂದು ಕಾಣಿಸುವ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಜಿ.ಪಂ. ಸದಸ್ಯ ಕೇಶವ ಗೌಡ ಬಜತ್ತೂರು, ಕಾಂಗ್ರೆಸ್ ಮುಂದಾಳುಗಳಾದ ಅಬ್ದುಲ್ ರಹಿಮಾನ್, ಸಲೀಂ ನೆಕ್ಕಿಲಾಡಿ, ಚಂದ್ರಶೇಖರ್, ಯು.ಕೆ. ಇಬ್ರಾಹಿಂ ಮೊದಲಾದ ಪ್ರಮುಖರಲ್ಲಿ ಪ್ರಕರಣವನ್ನು ಅನಪೇಕ್ಷಿತ ಘಟನಾವಳಿಗೆ ಕಾರಣವಾಗದಂತೆ ಬೆಳೆಸಬಾರದೆಂದು ವೃತ್ತ ನಿರೀಕ್ಷಕ ಸುರೇಶ್ ಕುಮಾರ್ಗೆ ಮನವಿ ಮಾಡಿದರು. ಸಂಘರ್ಷಮಯ ವಾತಾವರಣ ಸಹಜ ಸ್ಥಿತಿಗೆ ತರಲು 2 ದಿನಗಳ ಕಾಲ ಕಾಲೇಜಿಗೆ ರಜೆ ಸಾರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

