ದಕ್ಷಿಣ ಕನ್ನಡ

ಸಚಿವ ರಮಾನಾಥ ರೈ, ಖಾದರ್ ಇಂದಿನ ಪ್ರವಾಸ

Published On :

ಮಂಗಳೂರು: ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಜು.27ರಂದು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬೆಳಗ್ಗೆ 9.30ಕ್ಕೆ ಬಿ.ಸಿ.ರೋಡ್ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಪಾಲ್ಗೊಳ್ಳುವುದು. 10.30ಕ್ಕೆ ಡಿಸಿಸಿ ಬ್ಯಾಂಕ್ನಿಂದ ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆಯುವ ಉತ್ತರಾಖಂಡ ಜಲಪ್ರಳಯ ನಿಧಿ ಸಮರ್ಪಣೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಭಾಗವಹಿಸುವುದು, 2 ಗಂಟೆಗೆ ಬಿ.ಸಿ.ರೋಡ್ ಕಚೇರಿಯಲ್ಲಿ ಸಾರ್ವಜನಿಕ ಭೇಟಿ, 2.30 ಬಂಟ್ವಾಳ ನರಿಕೊಂಬುವಿನಲ್ಲಿ ಜನಶ್ರೀ ವಿಮಾ ಯೋಜನೆ ಕಾರ್ಯಕ್ರಮ, ಸಂಜೆ 3.30 ಬಂಟ್ವಾಳ ಬಡಗ ಕಜೆಕಾರ್ನಲ್ಲಿ ಗ್ರಾಮೀಣ ಸ್ಪಂದನ ಕಾರ್ಯಕ್ರಮ, ರಾತ್ರಿ 7ಕ್ಕೆ ಮೂಡುಬಿದಿರೆ ವಿದ್ಯಾಗಿರಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನಡೆಯುವ ಇಫ್ತಾರ್ ಕೂಟ, ರಾತ್ರಿ 9ಕ್ಕೆ ಮುಂಬೈಗೆ ಪ್ರಯಾಣ.
ಸಚಿವ ಖಾದರ್ ಕಾರ್ಯಕ್ರಮ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಜು.27ರಂದು ಬೆಳಗ್ಗೆ 7.30ಕ್ಕೆ ಉಳ್ಳಾಲ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ, 9ಕ್ಕೆ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಕಾಲೇಜಿನಲ್ಲಿ ಇಂಪ್ಲೆಸ್ ಕಾರ್ಯಕ್ರಮ, 10ಕ್ಕೆ ಪುರಭವನದಲ್ಲಿ ಹೆಲ್ತ್ ಕನ್ಸರ್ನ್ ಫೌಂಡೇಶನ್ ಕಾರ್ಯಕ್ರಮ, 10.30 ಲೇಡಿಗೋಷನ್ ಆಸ್ಪತ್ರೆಗೆ ಭೇಟಿ, ಸಭೆ.
ಮಧ್ಯಾಹ್ನ 1 ಗಂಟೆಗೆ ಪಾವೂರು-ಬೋಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ. 2 ಗಂಟೆಗೆ ಮುಡಿಪು ನವೋದಯ ಶಾಲೆಗೆ ಭೇಟಿ, 3ಕ್ಕೆ ಬಾಳೆಪುಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ, 3.30ಕ್ಕೆ ಫಜೀರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.