ದಕ್ಷಿಣ ಕನ್ನಡ

ಇನ್‌ಸ್ಪೈರ್ ಅವಾರ್ಡ್: ಅಕ್ಷಯ್ ರಾಜ್ಯಮಟ್ಟಕ್ಕೆ

Published On :

ಉಪ್ಪಿನಂಗಡಿ: ಮಂಗಳೂರು ತಾಲೂಕಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಇನ್‌ಸ್ಪೈರ್ ಅವಾರ್ಡ್ 2013- 14ನೇ ಸಾಲಿನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಅಕ್ಷಯ್ ಜಿ.ಕೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು, ವಾತಾವರಣಕ್ಕೆ ಸೇರುವ ಇಂಗಾಲದ ಡೈ ಆಕ್ಸೈಡ್ ಪ್ರಮಾಣ ಕಡಿಮೆ ಮಾಡುವಲ್ಲಿ ಸಹಕಾರಿಯಾಗುವ ಒಲೆಯ ಒಂದು ಮಾದರಿಯನ್ನು ಹಸಿರು ಒಲೆ ಇಂಗಾಲದ ಡೈ ಆಕ್ಸೈಡ್ ಮುಕ್ತ ಒಲೆ ಎಂಬ ಶೀರ್ಷಿಕೆಯಡಿ ಪ್ರದರ್ಶಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಿಕ್ಷಕಿ ಉಮಾ ಕಜೆ ಮಾರ್ಗದರ್ಶನದಲ್ಲಿ ಅಕ್ಷಯ್ ಈ ಮಾದರಿ ತಯಾರಿಸಿದ್ದಾರೆ.

ಮೂವರಿಗೆ ಡಾಕ್ಟರೇಟ್ ಪದವಿ
ಮಂಗಳೂರು: ಇಲ್ಲಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮೂವರು ಪ್ರಾಧ್ಯಾಪಕರಿಗೆ ಡಾಕ್ಟರೇಟ್ ಪದವಿ ದೊರಕಿದೆ.
 ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಕೆ.ಎಚ್.ವಿಶ್ವನಾಥ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮತ್ತು ಭೌತಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ರಾಜೇಶ್ ಕುಮಾರ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಹಾಗೂ ಸಿವಿಲ್ ಎಂಜಿನಿಯರಿಂಗ್ ವಿಭಾಗ ಮುಖ್ಯಸ್ಥೆ ಸುಜಾತ ಉನ್ನಿಕೃಷ್ಣನ್ ಅವರಿಗೆ ಸುರತ್ಕಲ್‌ನ ಎನ್‌ಐಟಿಕೆಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.